ETV Bharat / city

ಪ್ರೇಮ ವಿವಾಹಕ್ಕೆ ಸಿಗದ ಒಪ್ಪಿಗೆ: ಧಾರವಾಡದಲ್ಲಿ ಪ್ರೇಮಿಗಳ ಆತ್ಮಹತ್ಯೆ - ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ

ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ನವಲಗುಂದದಲ್ಲಿ ನಡೆದಿದೆ.

lovers-committed-suicide-in-dharwad
ನವಲಗುಂದ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು ಇಬ್ಬರು‌ ಮೃತ
author img

By

Published : Apr 5, 2022, 1:21 PM IST

ಧಾರವಾಡ: ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಇಬ್ಬರು ಪ್ರೇಮಿಗಳು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯುವತಿಯನ್ನು ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಸಾವಿತ್ರಿ ಮುತ್ತಪ್ಪ ನರಗುಂದ ಹಾಗೂ ಯುವಕನನ್ನು ಮಲ್ಲಪ್ಪ ದುರ್ಗಪ್ಪ ಮಾದರ ಎಂದು ಗುರುತಿಸಲಾಗಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಳಿಕ ಇಬ್ಬರನ್ನೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸೋಮವಾರ ರಾತ್ರಿ ಯುವತಿ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಯುವಕ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇವರಿಬ್ಬರು ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿಗೆ ಮನೆಯಲ್ಲಿ ಬೇರೆ ಕಡೆ ಮದುವೆ ಮಾಡಲು ಸಿದ್ದತೆ ನಡೆಸಿದ ವಿಷಯ ತಿಳಿದು ಇಬ್ಬರು ವಿಷ ಸೇವಿಸಿದ್ದರು. ಆದರೆ ಇಬ್ಬರಿಗೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಘಟನೆಗೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಯುವತಿ ವಿಚಾರಕ್ಕೆ ಸ್ನೇಹಿತನ ಕೊಲೆ, ನಾಲ್ವರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.