ETV Bharat / city

ಸಾಹಿತಿ ಡಾ. ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು..

ಡಾ. ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಆರೋಪಿಗಳನ್ನು ಇಂದು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನಂತರ ಡಿ.21 ಹಾಗೂ 22 ರಂದು ಸಾಕ್ಷಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತು..

M M Kalburgi murder case accused
ಕಲಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳು
author img

By

Published : Nov 24, 2021, 2:06 PM IST

ಧಾರವಾಡ : ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಎಂ‌ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಾಲ್ವರು ಆರೋಪಿಗಳನ್ನು ಇಂದು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನಂತರ ಡಿ.21 ಹಾಗೂ 22ರಂದು ಸಾಕ್ಷಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತು.

ಸಂಶೋಧಕ ಡಾ. ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣದ ಆರೋಪಿಗಳು..

ಆರೋಪಿಗಳಾದ ಹುಬ್ಬಳ್ಳಿಯ ಅಮಿತ್ ಬದ್ದಿ, ಧಾರವಾಡದ ಗಣೇಶ ಮಿಸ್ಕಿನ್, ಬೆಳಗಾವಿಯ ಪ್ರವೀಣ ಚತುರ್ ಹಾಗೂ ಮಹಾರಾಷ್ಟ್ರದ ವಾಸುದೇವ ಸೂರ್ಯವಂಶಿ‌ಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಪ್ರವೀಣ ಚತುರ್ ಅನ್ನು ಧಾರವಾಡದ ಕೇಂದ್ರ ಕಾರಾಗೃಹದಿಂದ ಹಾಗೂ ಉಳಿದ ಮೂವರನ್ನು ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಕರೆ ತಂದು ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಡಿ.21 ಹಾಗೂ 22ರಂದು ಸಾಕ್ಷಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು.

ಇದನ್ನೂ ಓದಿ: ACB Raid: ಗದಗ ಕೃಷಿ‌ ಅಧಿಕಾರಿಯ ಶಿವಮೊಗ್ಗ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ₹15 ಲಕ್ಷ ನಗದು ಪತ್ತೆ

ಇನ್ನು ನ್ಯಾಯಾಲಯದಿಂದ ಹೊರ ಹೋಗುವಾಗ ಆರೋಪಿ ಅಮಿತ್ ಬದ್ದಿ ನಾವೆಲ್ಲಾ ಅಮಾಯಕರು, ನಮ್ಮನ್ನು ಎಸ್ಐಟಿ ಅವರು ಸಿಲುಕಿಸಿದ್ದಾರೆ. ಪ್ರಜಾಪ್ರಭುತ್ವದ ಮೇಲೆ ನಮಗೆ ನಂಬಿಕೆಯಿದೆ. ನಾವೆಲ್ಲ ಆರೋಪಮುಕ್ತರಾಗಿ ಹೊರ ಬರುತ್ತೇವೆ ಎಂದು ಕೂಗಿದರು.

ಹಿನ್ನೆಲೆ : 2016ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣನಗರದ ನಿವಾಸಕ್ಕೆ ನುಗ್ಗಿ ಡಾ. ಎಂ ಎಂ‌ ಕಲಬುರ್ಗಿ ಅವರ ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.