ಹುಬ್ಬಳ್ಳಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂಲತಃ ಗದಗ ಜಿಲ್ಲೆಯ ಸೆಟ್ಲಮೆಂಟ್ ನಿವಾಸಿಯಾದ ರಮೇಶ ರತ್ನಪ್ಪ ಕಾಳೆ ಬಂಧಿತ ಆರೋಪಿ. ಈತ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದ ಇಂದಿರಾ ಕ್ಯಾಂಟೀನ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೆರೆಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ದಾಳಿ ಆರೋಪಿಯನ್ನು ಬಂಧಿಸಿ, ಆತನಿಂದ 16.800 ರೂ. ಮೌಲ್ಯದ 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಈ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ತಂಡಕ್ಕೆ ಪೊಲೀಸ್ ಆಯುಕ್ತರು ನಗದು ಬಹುಮಾನ ಘೋಷಿಸಿದ್ದಾರೆ.