ಹುಬ್ಬಳ್ಳಿ: ಬಸ್ ಹತ್ತುವ ವೇಳೆ ಬಸ್ ಅಡಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಗರದ ತಾಡಪತ್ರಿ ಗಲ್ಲಿಯಲ್ಲಿ ನಡೆದಿದೆ.
ಅರಳಿಕಟ್ಟಿ ಗ್ರಾಮದ ನಿವಾಸಿ ಶಿವನಗೌಡ ಅದರಗುಂಚಿ ಮೃತ ದುರ್ದೈವಿ. ತಮ್ಮ ಊರಿಗೆ ತೆರಳುವ ಬಸ್ ಹತ್ತುವ ವೇಳೆಯಲ್ಲಿ ನಿಯಂತ್ರಣ ತಪ್ಪಿ ಬಿದ್ದು, ಬಸ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ.
ಇನ್ನು ಮೃತ ಶಿವನಗೌಡ, ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.