ETV Bharat / city

ಯುವತಿಯ ಬಣ್ಣದ ಮಾತಿಗೆ ಮರುಳಾಗಿ ಹಣ ಕಳೆದುಕೊಂಡ ಹುಬ್ಬಳ್ಳಿ ಯುವಕ - ಯುವತಿಯ ಬಣ್ಣದ ಮಾತಿಗೆ ಮರುಳಾಗಿ ಹಣ ಕಳೆದುಕೊಂಡ ಹುಬ್ಬಳ್ಳಿ ಯುವಕ

ಫೇಸ್‌ಬುಕ್‌ ಮೂಲಕ ಪರಿಚಯ ಮಾಡಿಕೊಂಡ ಯುವತಿಯೊಬ್ಬಳು ಹುಬ್ಬಳ್ಳಿ ಯುವಕನಿಂದ ಸಾವಿರಾರು ರೂ. ಹಣ ಪಡೆದು ವಂಚಿಸಿದ್ದಾಳೆ ಎಂದು ಸೈಬರ್‌ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

hubli
ಹುಬ್ಬಳ್ಳಿ
author img

By

Published : Jan 4, 2022, 2:28 PM IST

ಹುಬ್ಬಳ್ಳಿ: ಫೇಸ್‌ಬುಕ್‌ ಮೂಲಕ ನಗರದ ಯುವಕನೊಬ್ಬನನ್ನು ಪರಿಚಯಿಸಿಕೊಂಡ ಯುವತಿಯೊಬ್ಬಳು ಹೂಡಿಕೆ ಮಾಡಲೆಂದು ಅಮೆರಿಕದಿಂದ ಬರುತ್ತಿದ್ದೇನೆಂದು ನಂಬಿಸಿ 59,200 ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ.

ಶಾಂತಿ ನಗರದ ನಿಖಿಲ್ ಶಾಹ ಅವರಿಗೆ ಅಶರ್ ಡಾಮಿನ್ ಎಂಬ ಯುವತಿ ಫೇಸ್‌ಬುಕ್ ರಿಕ್ವೆಸ್ಟ್ ಕಳುಹಿಸಿದ್ದರು. ರಿಕ್ವೆಸ್ಟ್‌ಗೆ ನಿಖಿಲ್ ಒಪ್ಪಿಗೆ ಸೂಚಿಸಿದ್ದರು. ಬಳಿಕ ನಿಖಿಲ್ ಸ್ನೇಹ ಸಂಪಾದಿಸಿದ ಯುವತಿ ವಾಟ್ಸ್​​​ಆ್ಯಪ್ ನಂಬರ್ ಪಡೆದಿದ್ದಳು. ತಮ್ಮ ಬಳಿ ಇರುವ ಯುಎಸ್ ಡಾಲರ್ ಅನ್ನು ಹುಬ್ಬಳ್ಳಿಯಲ್ಲಿ ಹೂಡಿಕೆ ಮಾಡಲು ಬರುತ್ತಿದ್ದೇನೆ ಎಂದು ನಂಬಿಸಿದ್ದಳು.

ನನ್ನ ಬಳಿ ಯೆಲ್ಲೋ ಕಾರ್ಡ್ ಇಲ್ಲದ ಕಾರಣ ಹಾಗೂ ಯುಎಸ್ ಡಾಲರ್ ಇರುವ ಕಾರಣಕ್ಕೆ ದೆಹಲಿ ಏರ್‌ಪೋರ್ಟ್‌ನಲ್ಲಿ ಕಸ್ಟಡಿಗೆ ಹಾಕಿದ್ದಾರೆ. ಬಿಡಿಸಿಕೊಳ್ಳಲು ಮತ್ತು ಹುಬ್ಬಳ್ಳಿಗೆ ವಿಮಾನ ಟಿಕೆಟ್ ಮತ್ತಿತರ ನೆಪ ಹೇಳಿ ನಿಖಿಲ್ ಅವರ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಸೈಬರ್‌ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ತಾಯಿ- ಮಗ ದುರ್ಮರಣ.. ಕಾರಣ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.