ಧಾರವಾಡ: ರಾಜಕೀಯಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸಲು ಮುಂದಾಗಿದೆ. ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣಕ್ಕೆ ಪಾದಯಾತ್ರೆ ಮಾಡುವವರು. ರಾಜಕಾರಣಕ್ಕೆ ಹೋರಾಟ ಮಾಡುವವರು ಕಾಂಗ್ರೆಸ್ಸಿಗರು. ಯೋಜನೆ ಜಾರಿಗೆ ಸರ್ಕಾರ ಮುಂದಾಗಿದ್ದರೂ, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಮೇಕೆದಾಟು ಯೋಜನೆ ಜಾರಿ ಮಾಡಲು ಸರ್ಕಾರ ಕ್ರಮ ವಹಿಸುತ್ತಿದೆ. ಅದನ್ನು ಕಾಂಗ್ರೆಸ್ ಅರ್ಥ ಮಾಡಿಕೊಳ್ಳಬೇಕಿತ್ತು. ಆದರೆ, ರಾಜಕಾರಣಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ. ಅವರಿಂದ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ ಎಂದು ಟಾಂಗ್ ಕೊಟ್ಟರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಗಳ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಹೇಳಿದ್ದಕ್ಕೆಲ್ಲ ನಾನು ಉತ್ತರ ಕೊಡಲಾಗುವುದಿಲ್ಲ ಎಂದರು.
ಇದನ್ನೂ ಓದಿ: ಬಿಜೆಪಿಯಿಂದ ಮಾತ್ರ ಮೇಕೆದಾಟು ಯೋಜನೆ ಅನುಷ್ಠಾನ: ಸಚಿವ ಡಾ. ಅಶ್ವತ್ಥ್ನಾರಾಯಣ