ETV Bharat / city

ಮನೆ, ಬೆಳೆ ಹಾನಿ ಕುರಿತು ವರದಿ ಸಲ್ಲಿಸಲು ಸಚಿವ ಜಗದೀಶ್ ಶೆಟ್ಟರ್ ಸೂಚನೆ - dharawad rain

ಅಪಾರ ಮಳೆಯಿಂದಾಗಿ ವಿವಿಧ ಇಲಾಖೆಗಳಿಗೆ ಸೇರಿರುವ ಕಟ್ಟಡ, ರಸ್ತೆ, ಸೇತುವೆಗಳು ಮತ್ತು ರೈತರ ಬೆಳೆ, ಮನೆಗಳು ಹಾನಿಯಾಗಿವೆ. ಇಲಾಖೆ ಮುಖ್ಯಸ್ಥರು ಹಾನಿ ವಿವಿರಗಳನ್ನು ಪರಿಶೀಲಿಸಿ ತಕ್ಷಣ ವರದಿ ಸಲ್ಲಿಸಬೇಕು. ಸರ್ಕಾರ ಅತಿವೃಷ್ಟಿ ಪರಿಹಾರಕ್ಕಾಗಿ ಜಿಲ್ಲಾಡಳಿತಕ್ಕೆ ಈಗಾಗಲೇ 5 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಚಿವರು ತಿಳಿಸಿದರು.

ಮನೆ, ಬೆಳೆ ಹಾನಿ ಕುರಿತು ವರದಿ ಸಲ್ಲಿಸಲು ಸಚಿವ ಜಗದೀಶ್ ಶೆಟ್ಟರ್ ಸೂಚನೆ

author img

By

Published : Aug 14, 2020, 12:00 AM IST

ಧಾರವಾಡ: ಕಳೆದ ಆಗಸ್ಟ್ 5 ಮತ್ತು 6 ರಂದು ಅತಿ ಹೆಚ್ಚಿನ ಮಳೆಯಿಂದಾಗಿ ಜಿಲ್ಲೆಯ ಗ್ರಾಮ ಮತ್ತು ನಗರ ವ್ಯಾಪ್ತಿಯಲ್ಲಿ ಸುಮಾರು 250ಕ್ಕೂ ಮನೆಗಳಿಗೆ ಹಾಗೂ 12,857 ಹೆಕ್ಟೆರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಈ ಕುರಿತು ಸಮೀಕ್ಷಾ ವರದಿಯನ್ನು ಅಧಿಕಾರಿಗಳು ಶೀಘ್ರವಾಗಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಅತಿವೃಷ್ಟಿ ಹಾನಿ ಕುರಿತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಅಪಾರ ಮಳೆಯಿಂದಾಗಿ ವಿವಿಧ ಇಲಾಖೆಗಳಿಗೆ ಸೇರಿರುವ ಕಟ್ಟಡ, ರಸ್ತೆ, ಸೇತುವೆಗಳು ಮತ್ತು ರೈತರ ಬೆಳೆ, ಮನೆಗಳು ಹಾನಿಯಾಗಿವೆ. ಇಲಾಖೆ ಮುಖ್ಯಸ್ಥರು ಹಾನಿ ವಿವಿರಗಳನ್ನು ಪರಿಶೀಲಿಸಿ ತಕ್ಷಣ ವರದಿ ಸಲ್ಲಿಸಬೇಕು. ಸರ್ಕಾರ ಅತಿವೃಷ್ಟಿ ಪರಿಹಾರಕ್ಕಾಗಿ ಜಿಲ್ಲಾಡಳಿತಕ್ಕೆ ಈಗಾಗಲೇ 5 ಕೋಟಿ ರೂ. ಬಿಡುಗಡೆ ಮಾಡಿದೆ. ಅಧಿಕಾರಿಗಳು ವಿವರವಾದ ವರದಿ ಸಲ್ಲಿಸಿದ ನಂತರ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.

ಮನೆ, ಬೆಳೆ ಹಾನಿ ಕುರಿತು ವರದಿ ಸಲ್ಲಿಸಲು ಸಚಿವ ಜಗದೀಶ್ ಶೆಟ್ಟರ್ ಸೂಚನೆ
ಮನೆ, ಬೆಳೆ ಹಾನಿ ಕುರಿತು ವರದಿ ಸಲ್ಲಿಸಲು ಸಚಿವ ಜಗದೀಶ್ ಶೆಟ್ಟರ್ ಸೂಚನೆ

ಕಳೆದ ಸಾಲಿನಲ್ಲಿ ಮನೆ ಹಾನಿಯಾದ ಫಲಾನುಭವಿಗಳಿಗೆ ಮನೆ ಪುನರ್ ನಿರ್ಮಾಣಕ್ಕೆ ವರ್ಗೀಕರಣದ ಅನುಗುಣವಾಗಿ ಪರಿಹಾರ ಹಣ ಬಿಡುಗಡೆ ಆಗುತ್ತದೆ. ಕಾಲಮಿತಿಯಲ್ಲಿ ಮನೆ ನಿರ್ಮಾಣ ಮುಗಿಸಿದರೆ ಪೂರ್ಣ ನೆರವು ದೊರೆಯುತ್ತದೆ. ಅಧಿಕಾರಿಗಳು ಹಾನಿಯಾದ ಮನೆಗಳ ಪುನರ್ ನಿರ್ಮಾಣ ಹಾಗೂ ದುರಸ್ತಿ ಕಾರ್ಯವನ್ನು ಖುದ್ದು ಪರಿಶೀಲಿಸಿ, ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಆಗಸ್ಟ್ ತಿಂಗಳ ಮಳೆಯಿಂದಾಗಿ ಒಂದು ಜೀವ ಹಾನಿಯಾಗಿದ್ದು, 5 ಲಕ್ಷ ಪರಿಹಾರ ವಿತರಿಸಲಾಗಿದೆ. 4 ಸಣ್ಣ ಹಾಗೂ 9 ದೊಡ್ಡ ಜಾನುವಾರುಗಳ ಹಾನಿಯಾಗಿದ್ದು, ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ. ತುಪ್ಪರಿ ಹಾಗೂ ಬೆಣ್ಣೆ ಹಳ್ಳದ ಪ್ರವಾಹದಿಂದ ಹಾಗೂ ಮಳೆಯಿಂದಾಗಿ ಜಿಲ್ಲೆಯ ಸುಮಾರು 12857 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಕೃಷಿ, ತೋಟಗಾರಿಕೆ, ರೇಷ್ಮೆ, ಸಾಂಖ್ಯಿಕ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಆರಂಭಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಈಗಾಗಲೇ ನೊಂದಾಯಿತ ರೈತರ ಬೆಳೆಹಾನಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗಿದ್ದು, ಭಾರತಿ ಆಕ್ಸಾ ವಿಮಾ ಕಂಪನಿಯ ಹಾಗೂ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮೀಕ್ಷೆ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿ.ಪಂ. ಸಿಇಓ ಡಾ.ಬಿ.ಸಿ. ಸತೀಶ್, ಲೋಕೋಪಯೋಗಿ, ಸಣ್ಣ ನೀರಾವರಿ, ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆ, ರಾಷ್ಟ್ರೀಯ ಹೆದ್ದಾರಿ, ಕೃಷಿ, ತೋಟಗಾರಿಕೆ, ಹೆಸ್ಕಾಂ, ಮಹಾನಗರ ಪಾಲಿಕೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಅತಿವೃಷ್ಟಿ ಹಾನಿ ಕುರಿತು ಇಲಾಖಾವಾರು ಅಂದಾಜು ವರದಿಯನ್ನು ಸಭೆಗೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.