ಹುಬ್ಬಳ್ಳಿ : ದಲಿತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ ಗ್ರಾಮದ ದಲಿತರ ಕೇರಿಯಲ್ಲಿ ಮೆಹಂದಿ ಕಾರ್ಯಕ್ರಮದ ಸಂದರ್ಭದಲ್ಲಿ ದಲಿತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ಖಂಡನೀಯ.
ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪಿಎಸ್ಐ ಒಬ್ಬರನ್ನು ಅಮಾನತು ಮಾಡಲಾಗಿದೆ. ಅಲ್ಲದೇ, 5 ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಪೂಜಾರಿ ತಿಳಿಸಿದರು.
ಅಮಾನತು ಬಗ್ಗೆ ಗೃಹ ಸಚಿವರು ಕ್ರಮಕೈಗೊಂಡಿದ್ದಾರೆ. ಎಲ್ಲರಿಗೂ ಕಾನೂನು ರಕ್ಷಣೆ ಇದೆ. ಯಾವುದೇ ಕಾರಣಕ್ಕೂ ದಲಿತರ ಮೇಲೆ ದಾಳಿ ಮಾಡುವಂತಿಲ್ಲ. ಸರ್ಕಾರ ಎಲ್ಲಾ ಜನಾಂಗದವರ ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದರು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.