ಧಾರವಾಡ: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಿಸಿರುವುದರಿಂದ ಹಾಲು ಒಕ್ಕೂಟಗಳಲ್ಲಿ ಹೆಚ್ಚುವರಿ ಹಾಲು ಸಂಗ್ರಹವಾಗುತ್ತಿದೆ. ಈ ಹಾಲನ್ನು ಅಧಿಸೂಚಿತ ಹಾಗೂ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಜನರಿಗೆ ಉಚಿತವಾಗಿ ಹಾಲು ವಿತರಿಸುವ ಕಾರ್ಯಕ್ಕೆ ಧಾರವಾಡ ಶ್ರೀನಗರದ ಭಾವಿಕಟ್ಟಿ ಪ್ಲಾಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಚಾಲನೆ ನೀಡಿದರು.
ಅವಳಿ ನಗರದಲ್ಲಿ ಸುಮಾರು 37 ಸಾವಿರ ಕೊಳಚೆ ಪ್ರದೇಶಗಳ ಕುಟುಂಬಗಳು ಸುಮಾರು 5 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರಿಗೆ ಹಾಲು ವಿತರಿಸಲಾಗುತ್ತಿದೆ. ಈ ಕಾರ್ಯಕ್ಕೆ ಧಾರವಾಡ ಹಾಲು ಒಕ್ಕೂಟ ಪ್ರತಿನಿತ್ಯ 25 ಸಾವಿರ ಲೀಟರ್ ಹಾಲು ಪೂರೈಸಲಿದೆ.