ಧಾರವಾಡ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ಮನಸೂರ ಗ್ರಾಮಕ್ಕೆ ಸಚಿವರು ಬಂದಿದ್ದ ವೇಳೆ ರೈತ ಕರೆಪ್ಪ ಅರಳಿಕಟ್ಟಿ ಹಾಗೂ ಈರವ್ವ ಯರಿಹಕ್ಕಲ ಎಂಬುವರ ಮನೆಗೆ ಭೇಟಿ ನೀಡಿ, ಅವರ ಸಮಸ್ಯೆಯನ್ನು ಆಲಿಸಿದರು. ಬಳಿಕ ಮಳೆಯಿಂದಾದ ಹಾನಿ ಶೀಘ್ರವೇ ಪರಿಹಾರ ಕೊಡಿಸುವ ಭರವಸೆ ನೀಡಿದ್ರು.
ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮಳೆಯಿಂದ ಸಾಕಷ್ಟು ಮನೆಗಳು ಬಿದ್ದಿವೆ. ಸಾಕಷ್ಟು ಪ್ರಮಾಣದಲ್ಲಿ ಬೆಳೆಯೂ ಹಾನಿಯಾಗಿದೆ. ಮನೆ ಬಿದ್ದವರಿಗೆ ಶೀಘ್ರ ಪರಿಹಾರ ಕೊಡಲಾಗುವುದು ಎಂಬ ಅಭಯ ನೀಡಿದರು.
ಜಿಲ್ಲೆಯ ಹಾನಿ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದೇವೆ. ಈಗಾಗಲೇ ಸಿಎಂ 7.5 ಕೋಟಿ ರೂ. ಧಾರವಾಡ ಜಿಲ್ಲೆಗೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಪರಿಹಾರ ವಿತರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.