ಧಾರವಾಡ: ಗೃಹ ಮಂತ್ರಿಗಳ ಹೇಳಿಕೆ ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, ಮೈಸೂರು ಸಾಮೂಹಿಕ ಅತ್ಯಾಚಾರ ತನಿಖೆ ಓಪನ್ ಡಿಸ್ಕಷನ್ ಮಾಡುವ ವಿಚಾರವಲ್ಲ. ಅಧಿಕಾರಿಗಳು ಆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಆ ಸಣ್ಣ ವಿಷಯ ಬೆಳೆಸುವ ಅವಶ್ಯಕತೆ ಇಲ್ಲ. ಗೃಹ ಇಲಾಖೆ ಸಿಎಂ ನಂತರದ ಅತ್ಯಂತ ಮಹತ್ವದ ಇಲಾಖೆ. ಎಲ್ಲೇ ತಪ್ಪಾದರೂ ಗೃಹ ಮಂತ್ರಿ ತಲೆಗೆ ಕಟ್ಟುವುದು ತಪ್ಪು. ಹೊಸ ವಿಷಯ ತಿಳಿದುಕೊಂಡು ಕೆಲಸ ಮಾಡಲು ಸ್ವಲ್ಪ ಸಮಯ ಹಿಡಯುತ್ತೆ ಎಂದು ಗೃಹ ಸಚಿವರನ್ನು ಸಮರ್ಥಿಸಿಕೊಂಡರು. ಅವರು ಬಹಳ ಸಮಾಧಾನದ ರಾಜಕಾರಣಿ. ಗೃಹ ಮಂತ್ರಿಗಳಿಗೆ ಗ್ರಿಪ್ ಸಿಕ್ಕಿದೆ ಎಂದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ:
ಮೈಸೂರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಪೊಲೀಸ್ ಇಲಾಖೆಯವರು ಎಲ್ಲ ರೀತಿಯಾಗಿ ಕೆಲಸ ಕಾರ್ಯ ಮಾಡುತ್ತಿದ್ದಾರೆ. ಈ ರೀತಿ ಘಟನೆಗಳು ಪುನರಾವರ್ತನೆ ಆಗಬಾರದು. ಆ ಬಗ್ಗೆ ಮುತುವರ್ಜಿ ವಹಿಸಬೇಕು. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಮುಖ್ಯಮಂತ್ರಿ ಆಸಕ್ತಿ ವಹಿಸಿದ್ದಾರೆ. ಈ ರೀತಿಯ ಘಟನೆಗಳು ಪುನರಾವರ್ತನೆ ಆಗದ ರೀತಿಯಲ್ಲಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಓದಿ: Gangrape ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ, ವೈಜ್ಞಾನಿಕ ಸಾಕ್ಷ್ಯಗಳು ಸಾಕಷ್ಟಿವೆ: ಡಿಜಿಪಿ ಪ್ರವೀಣ್ ಸೂದ್