ಧಾರವಾಡ: ನಾಯಕತ್ವ ಬದಲಾವಣೆ ಹಾಗೂ ಮುಖ್ಯಮಂತ್ರಿ ರೇಸ್ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ್ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹರಿದಾಡುತ್ತಿದೆ. ಈ ವದಂತಿ ಹಬ್ಬಿದ ಹಿನ್ನೆಲೆ ಶಾಸಕ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿದ್ದು, ಈ ಬಗ್ಗೆ ಶಾಸಕ ಬೆಲ್ಲದ ಲಿಖಿತವಾಗಿ ಸ್ಪಷ್ಟನೆ ನೀಡಿದ್ದಾರೆ. ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಕಪೋಲಕಲ್ಪಿತ ಸುದ್ದಿ ವರದಿಯಾಗುತ್ತಿದೆ ಎಂದು ಹೇಳಿದ್ದಾರೆ.
ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಈ ಬಗ್ಗೆ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಆರ್.ಎಸ್.ಎಸ್. ಸೇರಿದ ನಂತರ ಸಂಘ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದೆ. ಬಿಜೆಪಿ ತೊರೆಯುವ ವಿಚಾರ ಕಾಯಾ, ವಾಚಾ ಮನಸಾ ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಬೆಲ್ಲದ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಬೆಲ್ಲದ್ಗೆ ಸಚಿವ ಸ್ಥಾನ ಮಿಸ್ ಆಗಿದ್ದಕ್ಕೆ ನಾಳೆ ಧಾರವಾಡ ಬಂದ್: ವೈರಲ್ ಸುದ್ದಿ ನಂಬಬೇಡಿ