ಹುಬ್ಬಳ್ಳಿ: ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿಯ ಕ್ಯಾಮರಾಮೆನ್ ಸುನೀಲ್ ಪಾಚಂಗೆ ಅವರ ಮನೆಗೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸದಾ ಲವಲವಿಕೆಯಿಂದ ಕಾರ್ಯನಿರ್ವಹಿಸುತ್ತಿದ್ದ ಸುನೀಲ್ ಅವರು ನಿಧನದ ಸುದ್ದಿ ಕೇಳಿ ನಿಜಕ್ಕೂ ತೀವ್ರ ಆಘಾತವಾಯಿತು. ನಿಮ್ಮ ಕುಟುಂಬದ ಜೊತೆ ಸದಾ ನಾನಿರುವೆ ಎಂಬುದಾಗಿ ಕುಟುಂಬಸ್ಥರಿಗೆ ಧೈರ್ಯ ತುಂಬಿ, ವೈಯಕ್ತಿಕವಾಗಿ ಆರ್ಥಿಕ ಸಹಾಯ ಮಾಡಿದರು.