ETV Bharat / city

ನನ್ನ ಕ್ಷೇತ್ರದಲ್ಲಿ ವ್ಯಾಕ್ಸಿನ್ ಕೊರತೆ ಇಲ್ಲ: ಶಂಕರ ಪಾಟೀಲ್ ಮುನೇನಕೊಪ್ಪ - ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ್​ ಮುನೆನಕೊಪ್ಪ

ಧಾರವಾಡ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಬೇಡಿಕೆ ಇಟ್ಟಿದ್ದೇನೆ. ಯಾವುದಾದರೂ ಗ್ರಾಮದಲ್ಲಿ ಲಸಿಕೆ ಕೊರತೆ ಇರುವುದು ನನ್ನ ಗಮನಕ್ಕೆ ಬಂದರೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ್​ ಮುನೆನಕೊಪ್ಪ ತಿಳಿಸಿದ್ದಾರೆ.

MLA Shankar Patil Munenakoppa
ಶಂಕರ ಪಾಟೀಲ್ ಮುನೇನಕೊಪ್ಪ
author img

By

Published : Jul 5, 2021, 3:50 PM IST

ಹುಬ್ಬಳ್ಳಿ: ನವಲಗುಂದ ಕ್ಷೇತ್ರದಲ್ಲಿ ಸಮರ್ಪಕವಾಗಿ ಲಸಿಕೆ ನೀಡಲಾಗುತ್ತಿದೆ. ಇಲ್ಲಿವರೆಗೂ 9 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ್​ ಮುನೆನಕೊಪ್ಪ ಹೇಳಿದರು.

ಕೊರೊನಾ ಲಸಿಕೆ ಕುರಿತು ಮಾಹಿತಿ ನೀಡಿದ ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ್​ ಮುನೆನಕೊಪ್ಪ

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆರೋಗ್ಯ ಸಚಿವ ಸುಧಾಕರ್​ ಅವರೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ನೀಡುವಂತೆ ಬೇಡಿಕೆ ಇಟ್ಟಿದ್ದೇನೆ. ಯಾವುದಾದರೂ ಗ್ರಾಮದಲ್ಲಿ ಲಸಿಕೆ ಕೊರತೆ ಇರುವುದು ನನ್ನ ಗಮನಕ್ಕೆ ಬಂದರೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

ರಾಜಕೀಯ ಗೊಂದಲ ಬಗ್ಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ನಾನು ಮಾತನಾಡುವುದಿಲ್ಲ. ಅದು ನಮ್ಮ ವರಿಷ್ಠರಿಗೆ ಬಿಟ್ಟ ವಿಚಾರ. ಸಚಿವ ಸಂಪುಟ ವಿಸ್ತರಣೆಯಲ್ಲಿ ಈ ಬಾರಿ ನನಗೆ ಅವಕಾಶ ಕೊಟ್ಟರೆ ಉತ್ತಮವಾಗಿ ಕೆಲಸ ಮಾಡುತ್ತೇನೆ. ಈಗಾಗಲೇ ಎರಡು ಉನ್ನತ ಸ್ಥಾನ ನೀಡಿದ್ದಾರೆ. ಸಚಿವ ಸ್ಥಾನದ ಬಗ್ಗೆ ನಮ್ಮ ನಾಯಕರು ನೋಡಿಕೊಳ್ಳುತ್ತಾರೆ, ನಾನೆಂದು ಯಾರಿಗೂ ಸಚಿವ ಸ್ಥಾನದ ಬಗ್ಗೆ ಪ್ರಸ್ತಾಪ ಮಾಡುವುದಿಲ್ಲ ಎಂದರು.‌‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.