ಹುಬ್ಬಳ್ಳಿ: ಕೋವಿಡ್-19 ಪರಿಣಾಮ ಎಲ್ಲಾ ಆರೋಗ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಸಂಸತ್ ಮಳೆಗಾಲದ ಅಧಿವೇಶನ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸಂಸತ್ ಮುಂಗಾರು ಅಧಿವೇಶನ ಖಂಡಿತವಾಗಿಯೂ ನಡೆಯಲಿದೆ. ಸರ್ಕಾರವು ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
ಜೂನ್ 1ರಂದು ರಾಜ್ಯಸಭಾ ಸ್ಪೀಕರ್ ಎಂ.ವೆಂಕಯ್ಯ ನಾಯ್ಡು ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಾಮಾಜಿಕ ಅಂತರವನ್ನು ಗಮನದಲ್ಲಿಟ್ಟುಕೊಂಡು ಸಂಸತ್ ಮುಂಗಾರು ಅಧಿವೇಶನವನ್ನು ನಡೆಸುವ ಬಗ್ಗೆ ಚರ್ಚೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ನಡೆದ ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ 15 ಮತ್ತು ರಾಜ್ಯಸಭೆ 13 ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಕೊರೊನಾ ವೈರಸ್ ಹರಡುವ ಭೀತಿಯಿಂದ ಅಧಿವೇಶನದ ಎರಡನೇ ಭಾಗವನ್ನು ಮೊಟಕುಗೊಳಿಸಲಾಗಿತ್ತು.