ETV Bharat / city

ಕುಮಾರಸ್ವಾಮಿಗೆ ಬುದ್ಧಿ ಭ್ರಮಣೆಯಾಗಿದೆ: ರೇಣುಕಾಚಾರ್ಯ ವಾಗ್ದಾಳಿ - hd kumaraswamy rss statement

ಆರ್‌ಎಸ್‌ಎಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಕುಮಾರಸ್ವಾಮಿ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಕಿಡಿಕಾರಿದರು.

mp renukacharya
ಎಂ.ಪಿ. ರೇಣುಕಾಚಾರ್ಯ
author img

By

Published : Oct 7, 2021, 7:46 PM IST

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಅವರದ್ದು ವಿಕೃತ ಮನಸ್ಸು. ಸಂಘ ಪರಿವಾರದವರು ತಾಲಿಬಾನಿ​ಗಳಲ್ಲ. ಕಾಂಗ್ರೆಸ್- ಜೆಡಿಎಸ್ ಸಂಸ್ಕೃತಿ ತಾಲಿಬಾನಿಗಳದ್ದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ

ವಿಕಾಸಸೌಧದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಐಎಎಸ್, ಐಪಿಎಸ್ ಅಧಿಕಾರಿಗಳು ಸಂಘ ಪರಿವಾರದವರು ಆಗಿರಬಾರದಾ? ಆ ಸ್ಥಾನದಲ್ಲಿ ತಾಲಿಬಾನ್​ಗಳು ಇರಬೇಕಾ? ಎಂದು ಪ್ರಶ್ನಿಸಿದರು.

ಹೆಚ್​ಡಿಕೆಗೆ ಬುದ್ಧಿಭ್ರಮಣೆ :

ಆರ್‌ಎಸ್‌ಎಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಕಿಡಿಕಾರಿದರು. ದೇಶದ ಸಂಸ್ಕೃತಿ ಉಳಿಸುತ್ತಿರುವುದು ಆರ್​ಎಸ್​​ಎಸ್ ದೇಶದ ಸಂಕಷ್ಟದಲ್ಲಿ ಗಟ್ಟಿಯಾಗಿ ನಿಲ್ಲುತ್ತಿರುವುದು ಸಂಘ ಪರಿವಾರ. ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ ಎಂದರು.

ಐಟಿ ದಾಳಿ:

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇನೆ. ಉಮೇಶ್ ಹೆಸರು ಚನ್ನಾಗಿ ಗೊತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಆಪ್ತ ಉಮೇಶ್​​ ಮನೆ ಮೇಲೆ ಐಟಿ ದಾಳಿ: ಬಿಎಸ್​ವೈ, ಬಿವೈ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.