ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕು ಆಸ್ಪತ್ರೆಗೆ ಶಾಸಕಿ ಕುಸುಮಾ ಶಿವಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೊನಾ ವೈರಸ್ ಹರಡುತ್ತಿರುವುದರಿಂದ ಸ್ವಚ್ಚತೆ, ವೈದ್ಯಕೀಯ ಚಿಕಿತ್ಸೆ, ಸಲಕರಣೆ, ಆಸ್ಪತ್ರೆಯಲ್ಲಿ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ಶಾಸಕಿ ಮಾಹಿತಿ ಸಂಗ್ರಹಿಸಿದರು.

ಆಸ್ಪತ್ರೆಯಲ್ಲಿ ಪರಿಶೀಲನೆ ಬಳಿಕ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.