ಹುಬ್ಬಳ್ಳಿ: ಕೆ.ಜಿ ಹಳ್ಳಿ ಘಟನೆ ಹಿಂದೆ ರಾಜಕೀಯ ಹುನ್ನಾರ ಇದೆ. ಇಂತಹ ಘಟನೆಗಳು ನಡೆಯದಂತೆ ರಾಜ್ಯ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡುವುದು ಖಂಡನೀಯವಾಗಿದೆ. ಪೊಲೀಸ್ ಇಲಾಖೆ ಸಾಕಷ್ಟು ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲವರು ಅರಾಜಕತೆ ಸೃಷ್ಟಿಸಿ ರಾಜಕೀಯ ಲಾಭ ಪಡೆಯಬೇಕು ಎಂಬ ಹುನ್ನಾರದಲ್ಲಿದ್ದಾರೆ. ಇದರ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಕೂಡಲೇ ರಾಜ್ಯ ಸರ್ಕಾರ ತನಿಖೆ ನಡೆಸಬೇಕು ಎಂದರು.