ಹುಬ್ಬಳ್ಳಿ: ಇಲ್ಲಿನ ಕಲಘಟಗಿ ತಾಲೂಕಿನ ಜಿ. ಬಸವನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗೌನ ಕೆರೆಯಲ್ಲಿ ಹೂಳೆತ್ತುವ ಕಾಮಗಾರಿ ಪ್ರಾರಂಭಿಸಲಾಯಿತು.
ಸುಮಾರು 2,95,000 ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. 20ಕ್ಕೂ ಹೆಚ್ಚು ಕೂಲಿಕಾರರು ಕೆಲಸ ಮಾಡುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸಲಾಗುತ್ತಿದೆ.
ಈ ವೇಳೆ ಆಗಮಿಸಿದ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಕೋವಿಡ್-19 ಜಾಗೃತಿಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಕೂಲಿಕಾರ್ಮಿಕರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕಾಯಕ ಮಿತ್ರ ಆ್ಯಪ್ ಹಾಗೂ ಕೋವಿಡ್ -19 ಪಂಚ ಸೂತ್ರಗಳನ್ನು ವಿವರಿಸಿದರು.
ಗ್ರಾಮದ ತಿಪ್ಪಣ್ಣ ಪಲ್ಲೇದ್ ಹೊಲದಲ್ಲಿ 25 ಸಾವಿರ ರೂ. ವೆಚ್ಚದಲ್ಲಿ ಬದು ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದ್ದು, ಮಳೆ ನೀರು ಇಂಗಿಸಲು ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸಲು ಬದು ನಿರ್ಮಾಣ ಅತ್ಯಗತ್ಯ ಎಂದು ರೈತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.