ETV Bharat / city

ಧಾರವಾಡದಲ್ಲಿ ವರುಣನ‌‌ ಆರ್ಭಟ: ಮೂರು ಕಿಲೋಮೀಟರ್​​ ರಾಷ್ಟ್ರೀಯ ಹೆದ್ದಾರಿ ಬಂದ್ - ಹೆದ್ದಾರಿ ಸ್ಥಗಿತ

ಸತತ ನಾಲ್ಕು ಗಂಟೆಯಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ.

national-highway-bandh-
ರಾಷ್ಟ್ರೀಯ ಹೆದ್ದಾರಿ ಬಂದ್
author img

By

Published : Oct 5, 2020, 6:49 PM IST

ಹುಬ್ಬಳ್ಳಿ: ಸತತ ನಾಲ್ಕು ಗಂಟೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡ ಜಿಲ್ಲೆಯಲ್ಲಿ ವರುಣನ‌‌ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರ ಗಬ್ಬೂರು ಹಾಗೂ ಕುಂದಗೋಳ ಕ್ರಾಸ್ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ, ಮೂರು ಕಿಲೋ‌ಮೀಟರ್​​ವರಗೆ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿದ್ದು, ಸವಾರರು ಪರದಾಡುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು

ಧಾರವಾಡ ಜಿಲ್ಲೆಯ ‌ಕುಂದಗೋಳ, ಕಲಘಟಗಿ, ನವಲಗುಂದ ಹಾಗೂ ಹುಬ್ಬಳ್ಳಿ ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.