ETV Bharat / city

'ಹಿಂದೂ ಧರ್ಮ, ಹಿಂದೂಗಳ ರಕ್ಷಣೆಗೆ ಪರ್ಯಾಯ ರಾಜಕಾರಣ ಬೇಕಿದೆ' - muslim youth murder in mangaluru

ಹರ್ಷ, ಚಂದ್ರು, ಪ್ರವೀಣನ ಹತ್ಯೆಯ ಹಿಂದೆ ಜಿಹಾದಿ ಮನಸ್ಥಿತಿ ಎದ್ದು ಕಾಣುತ್ತಿದೆ. ಈ ಎಲ್ಲ ಘಟನೆಗಳ ಹಿಂದೆ ಎಸ್​ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕೈವಾಡ ಮೇಲ್ನೋಟಕ್ಕೆ ಕಂಡುಬಂದರೂ ಸರ್ಕಾರ ನಿಷೇಧಿಸದಿರುವುದು ಖೇದಕರ ಎಂದು ಅಖಿಲ ಭಾರತ ಹಿಂದೂಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಹೇಳಿದರು.

alternative political party
ಅಖಿಲ ಭಾರತ ಹಿಂದೂಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ
author img

By

Published : Aug 1, 2022, 4:14 PM IST

ಹುಬ್ಬಳ್ಳಿ: ಹಿಂದೂ ಧರ್ಮ ಹಾಗೂ ಹಿಂದೂಗಳ ರಕ್ಷಣೆಗೆ ರಾಜ್ಯದಲ್ಲಿ ಪರ್ಯಾಯ ರಾಜಕಾರಣದ ಅವಶ್ಯಕತೆ ಇದೆ. ಆಗಸ್ಟ್ 6 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಹೊರತುಪಡಿಸಿ ಇನ್ನುಳಿದ ಎಲ್ಲ ಹಿಂದೂಪರ ಸಂಘಟನೆಗಳ ಸಭೆ ಕರೆಯಲಾಗಿದೆ ಎಂದು ಅಖಿಲ ಭಾರತ ಹಿಂದೂಸಭಾದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ತಿಳಿಸಿದರು.

ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದ ರಾಜಕೀಯ ವ್ಯವಸ್ಥೆ ಅಸ್ಥಿರಗೊಂಡಿದೆ. ಹಿಂದುಗಳು ಹಾಗೂ ಹಿಂದೂ ಕಾರ್ಯಕರ್ತರು ನಿರ್ಭಯದಿಂದ ಬದುಕು ನಡೆಸುವುದು ಕಷ್ಟವಾಗಿದೆ. ಹರ್ಷ, ಚಂದ್ರು, ಪ್ರವೀಣನ ಹತ್ಯೆಯ ಹಿಂದೆ ಜಿಹಾದಿ ಮನಸ್ಥಿತಿ ಎದ್ದು ಕಾಣುತ್ತಿದೆ. ಈ ಎಲ್ಲ ಘಟನೆಗಳ ಹಿಂದೆ ಎಸ್​ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕೈವಾಡ ಮೇಲ್ನೋಟಕ್ಕೆ ಕಂಡುಬಂದರೂ ಸರ್ಕಾರ ಇವುಗಳನ್ನು ನಿಷೇಧಿಸದಿರುವುದು ಖೇದಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಮತೀಯ ಶಕ್ತಿಗಳನ್ನು ತೊಡೆದು ಹಾಕುವ ಬದಲಾಗಿ ಅವುಗಳಿಗೆ ಕುಮ್ಮಕ್ಕು ನೀಡುತ್ತಿದೆ. ಬಿಜೆಪಿ ಯಾವತ್ತೂ ಕೇಸರಿ ಪಕ್ಷವಾಗುವುದಿಲ್ಲ. ಅಲ್ಲಿ ಅಲ್ಪಸಂಖ್ಯಾತ ಘಟಕಗಳಿವೆ. ತಮ್ಮ ಸ್ವಾರ್ಥ ರಾಜಕಾರಣಕ್ಕೆ ಹಿಂದೂ ಕಾರ್ಯಕರ್ತರನ್ನು ಬಿಜೆಪಿ ಬಲಿಕೊಡುತ್ತದೆ. ಹಿಂದೂ ಕಾರ್ಯಕರ್ತರ ಜೀವ, ಗೋಮಾತೆ, ಆಸ್ತಿಪಾಸ್ತಿ ರಕ್ಷಣೆಗೆ ಹಿಂದೂ ಶಕ್ತಿಗಳು ಒಂದಾಗಿ ಮುಂದಿನ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಅವರು ಪ್ರಕಟಿಸಿದರು.

ಬೆಂಗಳೂರಿನಲ್ಲಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಹಿಂದೂ ಮಹಾಸಭಾ, ಶಿವ ಸೇನೆ, ಹಿಂದೂ ಜನಜಾಗೃತಿ ಹಾಗೂ ಸನಾತನ ಸಂಸ್ಥೆ ಸೇರಿದಂತೆ ಇನ್ನಿತರ ಹಿಂದೂಪರ ಸಂಘಟನೆಗಳ ಪ್ರಮುಖರ ಸಭೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಮಹತ್ವದ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: ನಮ್ಮದು ರಾಷ್ಟ್ರೀಯ ಪಕ್ಷ, ಬೇಧ ಭಾವ ಮಾಡುವ ಅವಶ್ಯಕತೆ ಇಲ್ಲ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.