ಧಾರವಾಡ : ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಹಿಂದೂಯೇತರ ವ್ಯಾಪಾರಿಗಳ 4 ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ. ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಬಿಸಾಬ್ ಎಂಬುವವರ ಅಂಗಡಿ ಸೇರಿದಂತೆ ಇತರೆ ನಾಲ್ಕು ಅಂಗಡಿಗಳಿಗೆ ಹಾನಿಮಾಡಲಾಗಿದೆ. ಅಂಗಡಿಯಲ್ಲಿದ್ದ ಕಲ್ಲಂಗಡಿ ಹಣ್ಣು, ತೆಂಗಿನಕಾಯಿ ಒಡೆದು ಹಾಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಕಳೆದ 15 ದಿನಗಳ ಹಿಂದೆ ಶ್ರೀರಾಮಸೇನಾ ಕಾರ್ಯಕರ್ತರು ಆವರಣದಲ್ಲಿ ಹಿಂದೂಯೇತರ ಅಂಗಡಿಗಳ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಮನವಿ ನೀಡಿದ್ದರು. ಮನವಿ ಸ್ವೀಕರಿಸಿದ್ದ ದೇವಸ್ಥಾನದ ಆಡಳಿತ ಮಂಡಳಿ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಭರವಸೆ ನೀಡಿತ್ತು. ಆದರೆ, ಈ ಕುರಿತು ದೇವಸ್ಥಾನ ಸಮಿತಿ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಏಕಾಏಕಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಿಕೇರಿಗೆ ಬಂದು ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು : ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಟೆಕ್ಕಿ ಸಮೂಹದಿಂದ ಭಾರೀ ಆಕ್ರೋಶ