ಧಾರವಾಡ: ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಇದುವರೆಗೂ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 39 ಕ್ಕೆ ಏರಿದೆ.
24 ವರ್ಷದ ಮಹಿಳೆಗೆ (ಪಿ-2002) ಕೊರೊನಾ ಸೋಂಕು ದೃಢಪಟ್ಟಿದ್ದು ಈಕೆ ಆಂಧ್ರಪ್ರದೇಶದಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಮಹಿಳೆ ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಈಗ ಮಹಿಳೆಗೆ ಕೊರೊನಾ ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ. ಈಗಾಗಲೇ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.