ಹುಬ್ಬಳ್ಳಿ(ಧಾರವಾಡ): ಉಕ್ರೇನ್ನಲ್ಲಿ ಧಾರವಾಡ ಜಿಲ್ಲೆಯ ಮತ್ತೋರ್ವ ವಿದ್ಯಾರ್ಥಿನಿ ಸಿಲುಕಿಕೊಂಡಿದ್ದಾಳೆ. ಹುಬ್ಬಳ್ಳಿಯ ಶಾಂತಿನಗರದ ನಿವಾಸಿ ನಾಝಿಲಾ ಗಾಜಿಪುರ ಉಕ್ರೇನ್ನಲ್ಲಿ ಸಿಲುಕಿಕೊಂಡ ವಿದ್ಯಾರ್ಥಿನಿ.
ಎಂಬಿಬಿಎಸ್ ವ್ಯಾಸಂಗ ಮಾಡಲೆಂದು ಫೆ. 09 ಕ್ಕೆ ಉಕ್ರೇನ್ಗೆ ತೆರಳಿದ್ದರು. 15 ದಿನ ಕಳೆಯುವುದರೊಳಗಾಗಿ ಆತಂಕದ ಕ್ಷಣಗಳನ್ನು ಎದುರಿಸುವಂತಾಗಿದೆ. ವಿಮಾನ ಹಾರಾಟ ರದ್ದಾದ ಹಿನ್ನೆಲೆ ವಿದ್ಯಾರ್ಥಿನಿ ಮತ್ತು ಪೋಷಕರ ಆತಂಕ ಮತ್ತಷ್ಟು ಹೆಚ್ಚಾಗಿದೆ. ಉಕ್ರೇನಿನ ಕಾಲೇಜು ವಸತಿ ಗೃಹದಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ನಾಝಿಲಾ ತಮ್ಮ ಕುಟುಂಬದ ಸದಸ್ಯರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದನ್ನೂ ಓದಿ: ಉಕ್ರೇನ್ನಲ್ಲಿ ಕೊಡಗು ವಿದ್ಯಾರ್ಥಿಗಳ ಪರದಾಟ.. ಪೋಷಕರಲ್ಲಿ ಆತಂಕ
ಮಗಳು ಎಂಬಿಬಿಎಸ್ ವ್ಯಾಸಂಗ ಮಾಡಲೆಂದು ಹೋಗಿದ್ದಳು. ಆದ್ರೀಗ ಪರಿಸ್ಥಿತಿ ಹದಗೆಟ್ಟಿದೆ. ವಸತಿ ಗೃಹದಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಕೂಡಲೇ ಮಗಳನ್ನು ಕರೆಸಿಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದು ಸರ್ಕಾರಕ್ಕೆ ನಾಝಿಲಾ ತಾಯಿ ನೂರ್ ಜಹಾನ್ ಮನವಿ ಮಾಡಿದ್ದಾರೆ. ಈಗಾಗಲೇ ಹುಬ್ಬಳ್ಳಿ ತಹಶೀಲ್ದಾರ ಶಶಿಧರ ಮಾಡ್ಯಾಳ ಅವರನ್ನು ಭೇಟಿ ಮಾಡಿ, ಮಗಳನ್ನು ಸುರಕ್ಷಿತವಾಗಿ ಕರೆ ತರುವಂತೆ ಮನವಿ ಮಾಡಿದ್ದಾರೆ.