ETV Bharat / city

ವಾಹ್‌'ಕಿಂಗ್‌'!!.. ಚುನಾವಣಾ ಪ್ರಚಾರದ ಒತ್ತಡ ಮಧ್ಯೆಯೂ ಸಿದ್ದರಾಮಯ್ಯ ಫಿಟ್‌ ಅಂಡ್‌ ಫೈನ್‌.. - Opposition leader siddaramaiah

ಇಂದು ಸಿಂದಗಿ ಕ್ಷೇತ್ರದ ಪ್ರಚಾರ ಕಾರ್ಯದಲ್ಲಿ ತೊಡಗಲಿರುವ ಸಿದ್ದರಾಮಯ್ಯ, ಪ್ರಚಾರಕ್ಕೆ ತೆರಳುವ ಮುನ್ನ ಸೈಕ್ಲಿಂಗ್ ಮಾಡಿದ್ದಾರೆ. ಈ ವೇಳೆ ಸ್ಥಳೀಯ ನಾಯಕರು ಮಾಜಿ ಸಿಎಂಗೆ ಸಾಥ್ ನೀಡಿದ್ದಾರೆ..

siddaramaiah performed Physical Exercise
ದೈಹಿಕ ಕಸರತ್ತು ನಡೆಸುತ್ತಿರುವ ಸಿದ್ದರಾಮಯ್ಯ
author img

By

Published : Oct 18, 2021, 2:40 PM IST

ಹುಬ್ಬಳ್ಳಿ : ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಸಮರಕ್ಕೆ ರಾಜಕೀಯ ಪಕ್ಷಗಳು ತಂತ್ರ-ಪ್ರತಿತಂತ್ರ ರೂಪಿಸುವ ಮೂಲಕ ಎರಡು ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಳ್ಳಲು ಎಲ್ಲಿಲ್ಲದ ಹರಸಾಹಸ ಪಡುತ್ತಿವೆ. ಇದೆಲ್ಲದರ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯಕ್ಕೆ ಆದ್ಯತೆ ನೀಡಿ ಜಿಮ್​​ನಲ್ಲಿ ವರ್ಕೌಟ್ ಮಾಡಿದ್ದಾರೆ.

ದೈಹಿಕ ಕಸರತ್ತು ನಡೆಸುತ್ತಿರುವ ಸಿದ್ದರಾಮಯ್ಯ..

ಇಂದು ಬೆಳಗ್ಗೆಯೇ ಹುಬ್ಬಳಿಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್​​ವೊಂದರಲ್ಲಿ ವಾಕಿಂಗ್ ಮಾಡಿ, ದೈಹಿಕ ಕಸರತ್ತು ನಡೆಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಒತ್ತಡದ ಮಧ್ಯೆಯೂ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ.

ಇಂದು ಸಿಂದಗಿ ಕ್ಷೇತ್ರದ ಪ್ರಚಾರ ಕಾರ್ಯದಲ್ಲಿ ತೊಡಗಲಿರುವ ಸಿದ್ದರಾಮಯ್ಯ, ಪ್ರಚಾರಕ್ಕೆ ತೆರಳುವ ಮುನ್ನ ಸೈಕ್ಲಿಂಗ್ ಮಾಡಿದ್ದಾರೆ. ಈ ವೇಳೆ ಸ್ಥಳೀಯ ನಾಯಕರು ಮಾಜಿ ಸಿಎಂಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ : ಪೊಲೀಸರನ್ನು ಕೇಸರೀಕರಣ ಮಾಡಿರುವುದಕ್ಕೆ ಆಕ್ಷೇಪಿಸಿದ್ದೇನೆ ಅಷ್ಟೇ: ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.