ETV Bharat / city

ಭೂ ಸುಧಾರಣಾ ಕಾಯಿದೆ ತಿದ್ದುಪಡಿ ವಿರೋಧ: ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರ ಪ್ರತಿಭಟನೆ

ಕೊರೊನಾ ವೈರಸ್ ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ವ್ಯಾಪಕವಾದ ಭ್ರಷ್ಟಾಚಾರ ನಡೆಸಿದ್ದು, ಈ ಕುರಿತು ಉಚ್ಚನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

author img

By

Published : Aug 20, 2020, 3:18 PM IST

Updated : Aug 20, 2020, 4:02 PM IST

Opposition to Land Amendment Act Congress protest
ಭೂ ಸುಧಾರಣಾ ಕಾಯಿದೆ ತಿದ್ದುಪಡಿ ವಿರೋಧ: ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರ ಪ್ರತಿಭಟನೆ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಖಂಡಿಸಿ ಹಾಗೂ ಕೊರೊನಾ ನಿಯಂತ್ರಣ ಹೆಸರಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಇಂದಿರಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿದರು.

ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ವೈರಸ್ ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ವ್ಯಾಪಕವಾದ ಭ್ರಷ್ಟಾಚಾರ ನಡೆಸಿದ್ದು, ಈ ಕುರಿತು ಉಚ್ಚನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಇನ್ನೂ ಸರ್ಕಾರ ಜಾರಿಗೊಳಿಸಿದ ಕಾಯಿದೆಯಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ಭೂಮಿ ಕಳೆದು ಕೊಳ್ಳಲಿದ್ದಾರೆ. ಭೂ ದಲ್ಲಾಳಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳು ರೈತರಿಗೆ ಹಣದ ಆಮಿಷ ತೋರಿಸಿ ರೈತರ ಭೂಮಿಯನ್ನು ಕಬಳಿಸಲಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ರಾಜ್ಯ ಸರ್ಕಾರ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

Last Updated : Aug 20, 2020, 4:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.