ETV Bharat / city

ಮೀಸಲಾತಿ‌ ಕೊಡಿಸಿ ಇಲ್ಲವೇ, ರಾಜೀನಾಮೆ ನೀಡಿ: ಸಚಿವರಿಗೆ ಪಂಚಮಸಾಲಿ ಸಮಾಜದ ಮುಖಂಡರ ಎಚ್ಚರಿಕೆ - ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ

ಪಂಚಮಸಾಲಿ ಸಮಾಜಕ್ಕೆ ನೆರವಾಗುವ ಕೆಲಸವನ್ನು ಸಚಿವರಾದ ನಿರಾಣಿ ಹಾಗೂ ಸಿ.ಸಿ. ಪಾಟೀಲ್​ ಮಾಡಬೇಕು. ಇಲ್ಲವಾದ್ರೆ, ನೀವು ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Panchamalsi community leaders warning to ministers
ಸಚಿವರಿಗೆ ಪಂಚಮಸಾಲಿ ಸಮಾಜದ ಮುಂಖಡರ ಎಚ್ಚರಿಕೆ
author img

By

Published : Feb 25, 2021, 11:07 AM IST

ಹುಬ್ಬಳ್ಳಿ: ಸಚಿವರಾದ ಸಿ.ಸಿ.ಪಾಟೀಲ್ ಹಾಗು ಮುರುಗೇಶ್​ ನಿರಾಣಿ ವೈಯಕ್ತಿಕ ಸ್ವಾರ್ಥಗೋಸ್ಕರ ಪಂಚಮಸಾಲಿ ಸಮಾಜವನ್ನು 2ಎಗೆ ಸೇರ್ಪಡೆ ಮಾಡುವ ಹೋರಾಟದಿಂದ ಹಿಂದೆ ಸರಿದಿದ್ದಾರೆ ಎಂದು ಪಂಚಮಸಾಲಿ ಸಮಾಜದ ಮುಖಂಡರಾದ ಗಂಗಾಧರ ದೊಡ್ಡವಾಡ ಮತ್ತು ವಿರೂಪಾಕ್ಷ ಕಳ್ಳಿಮನಿ ಆರೋಪಿಸಿದ್ದಾರೆ.

ಸಚಿವರಿಗೆ ಪಂಚಮಸಾಲಿ ಸಮಾಜದ ಮುಖಂಡರ ಎಚ್ಚರಿಕೆ

ನಗರದಲ್ಲಿ ಜಂಟಿ ಮಾಧ್ಯಮಗೋಷ್ಟಿಯಲ್ಲಿ ನಡೆಸಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ 27 ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾವೇಶ ಕಾಂಗ್ರೆಸ್ ಪ್ರಾಯೋಜಿತ ಎಂಬ ನಿರಾಣಿ ಹೇಳಿಕೆ ಸತ್ಯಕ್ಕೆ ದೂರವಾಗಿದೆ‌. ಇದು ಸಮಾಜದ ಸಮಾವೇಶ ಹಾಗೂ ಕೆಲಸವಾಗಿದೆ. ಯಾವುದೇ ಪಕ್ಷಕ್ಕೆ ಅನುಕೂಲ ಆಗಲೆಂದು ನಾವು ಹೋರಾಡುತ್ತಿಲ್ಲ ಎಂದರು.

ಓದಿ: ಪಟ್ಟು ಸಡಿಲಿಸದ ಪಂಚಮಸಾಲಿಗಳು: ಇಂದು ಸಂಜೆ ದುಂಡು ಮೇಜಿನ ಸಭೆ

ಹೆಚ್ಚಿನ ಮೀಸಲಾತಿ ದೊರೆತರೆ ನಮ್ಮ ಯುವಕ-ಯುವತಿಯರಿಗೆ ಅನುಕೂಲ ಆಗುತ್ತದೆ. ಅದಕ್ಕಾಗಿ ನಾವು ಶ್ರಮಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ವರದಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆದಷ್ಟು ಬೇಗ ವರದಿ ಪಡೆದು ಸಮಾಜಕ್ಕೆ ನೆರವಾಗುವ ಕೆಲಸವನ್ನು ಸಚಿವರಾದ ನಿರಾಣಿ ಹಾಗೂ ಸಿ.ಸಿ.ಪಾಟೀಲ್​ ಮಾಡಬೇಕು. ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.