ಹುಬ್ಬಳ್ಳಿ : ಬಿಆರ್‌ಟಿಎಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ಓರ್ವ ಪಾದಚಾರಿ ರಸ್ತೆ ದಾಟುತ್ತಿದ್ದ ವೇಳೆ ಬಿಆರ್‌ಟಿಎಸ್ ಬಸ್ ಗುದ್ದಿದ ಹಿನ್ನೆಲೆ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ವ್ಯಕ್ತಿಯ ಹೆಸರು, ಅವರು ಯಾರೆಂದು ತಿಳಿದು ಬಂದಿಲ್ಲ.
ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಈ ಕುರಿತು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ದಾಖಲೆ ಬಳಸಿ ಹಣ ವಂಚನೆ : ಆನ್ಲೈನ್ನಲ್ಲಿ ಸಾಲ ಪಡೆಯುವ ಮುನ್ನ ಎಚ್ಚರ!