ಹುಬ್ಬಳ್ಳಿ: ಲಾಕ್ಡೌನ್ನಿಂದ ಸ್ಥಗಿತವಾಗಿದ್ದ ಪ್ರಯಾಣಿಕ ವಾಹನಗಳ ಸಂಚಾರಕ್ಕೆ ಕೆಲ ದಿನಗಳ ಹಿಂದೆಯಷ್ಟೇ ಮರುಚಾಲನೆ ನೀಡಲಾಗಿದೆ. ರಾಜ್ಯದ ವಾಯುವ್ಯ ಸಾರಿಗೆ ಸಂಸ್ಥೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂಬ ಆರೋಪ ಪ್ರಯಾಣಕರ ವಲಯದಿಂದ ಕೇಳಿಬರುತ್ತಿದೆ. ಜನರು ಬಸ್ ಹತ್ತಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.
ಕೇಂದ್ರದ ಆದೇಶದಂತೆ ರಾಜ್ಯದ ವಾಯುವ್ಯ ಸಾರಿಗೆ ಸಂಸ್ಥೆ ಬಸ್ ಸೇವೆ ಪುನರಾರಂಭ ಮಾಡಿದ್ದು, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ನಗರದ ಬಸ್ ನಿಲ್ದಾಣದಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದೆ. ಬಸ್ ಹತ್ತುವ ಪ್ರತಿಯೊಬ್ಬ ಪ್ರಯಾಣಿಕರನ್ನು ತಪಾಸಣೆ ಮಾಡುವ ಮೂಲಕ ನಿಲ್ದಾಣದಲ್ಲಿ ಪ್ರವೇಶ ನೀಡಲಾಗುತ್ತಿದೆ.
ಬಸ್ ನಿಲ್ದಾಣ ಹೊರತು ಪಡಿಸಿ ಉಳಿದೆಡೆ ಬಸ್ ಏರುವ ಪ್ರಯಾಣಿಕರಿಗೆ ತಪಾಸಣೆ ಮಾಡದೆ ಬಸ್ನೊಳಗೆ ಹತ್ತಿಸಿಕೊಳ್ಳಲಾಗುತ್ತಿದೆ. ಇದರಿಂದ ಪ್ರಯಾಣಿಕರು ಬಸ್ನಲ್ಲಿ ಪ್ರಯಾಣಿಸಲು ಹಿಂದು-ಮುಂದು ನೋಡುವಂತಾಗಿದೆ. ಮಾರ್ಗ ಮಧ್ಯದಲ್ಲಿ ಹತ್ತಿಕೊಂಡ ವ್ಯಕ್ತಿಗೆ ಸೋಂಕು ಇದ್ದರೆ ಹೇಗೆ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.
ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಬೆಳೆಸುವಂತಹ ಪ್ರತಿಯೊಬ್ಬ ಪ್ರಯಾಣಿಕರಿಗೂ ತಪಾಸಣೆಗೆ ಒಳಪಡಿಸಬೇಕು ಎಂಬುವುದು ಪ್ರಯಾಣಿಕರ ಮನವಿ.