ಹುಬ್ಬಳ್ಳಿ: ಅಧಿಕಾರ ಕಳೆದುಕೊಂಡು ಹತಾಶರಾದವರು ಮಧ್ಯಂತರ ಚುನಾವಣೆ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ತೀರುಗೇಟು ನೀಡಿದರು.
ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ರೋಟಾ ವೈರಸ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ಬರಲಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತೀರುಗೇಟು ನೀಡಿದರು.
ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸುತ್ತೆ. ಮಂತ್ರಿ ಮಂಡಲ ರಚನೆಯಾದ ಬಳಿಕ ಶಾಸಕರು ಸ್ವಲ್ಪ ಅಸಮಾಧಾನಗೊಂಡಿದ್ದಾರೆ. ಅವರನ್ನು ಸಮಾಧಾನ ಮಾಡುವ ಕೆಲಸಗಳು ನಡೆಯುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಲ್ಲ. ದೇಶದಲ್ಲಿ ನೆರೆ ಹಾವಳಿಗೆ ಒಳಗಾದ ಯಾವ ರಾಜ್ಯಕ್ಕೂ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ. ಹೀಗಾಗಿ ಮಲತಾಯಿ ಧೋರಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.