ETV Bharat / city

ಪೀರನವಾಡಿ ವಿವಾದ: ಕಾರ್ಯಕರ್ತರ ವಿರುದ್ಧದ ಮೊಕದ್ದಮೆ ಹಿಂಪಡೆಯಲು ಕರವೇ ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮೇಲೆ ಹಾಕಿರುವ ಮೊಕದ್ದಮೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.

Peranavadi controversy case to be withdrawn karave_protest
ಪೀರನವಾಡಿ ವಿವಾದ, ಕಾರ್ಯಕರ್ತರ ಮೊಕದ್ದಮೆ ಹಿಂಪಡೆಯಬೇಕು: ಕರವೇ ಆಗ್ರಹ
author img

By

Published : Aug 29, 2020, 1:47 PM IST

ಧಾರವಾಡ: ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಮಾಡಿದ ಕರವೇ ಕಾರ್ಯಕರ್ತರ ಮೇಲೆ ಹಾಕಿರುವ ಮೊಕದ್ದಮೆ ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಎಂಇಎಸ್ ಸಂಘಟನೆ ನಿಷೇಧ ಮಾಡುವಂತೆ ಘೋಷಣೆ ಕೂಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

ಈ‌ ಕೂಡಲೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮೇಲೆ ಹಾಕಿರುವ ಮೊಕದ್ದಮೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.