ಹುಬ್ಬಳ್ಳಿ: ಇಂಜಿನಿಯರ್ ವಿದ್ಯಾರ್ಥಿಗಳ ಪಾಕ್ ಪರ ಘೋಷಣೆ ಪ್ರಕರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಸರ್ಕಾರಿ ಶಾಲೆಯ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿರುವುದು ಬೆಳಕಿಗೆ ಬಂದಿದೆ.
ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಯಾರೋ ದುಷ್ಕರ್ಮಿಗಳು ಪಾಕಿಸ್ತಾನ ಜಿಂದಾಬಾದ್, ಟಿಪ್ಪು ಸುಲ್ತಾನ್ ಶಾಲೆ ಎಂದು ಬರೆದಿದ್ದಾರೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿಯು ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.