ಹುಬ್ಬಳ್ಳಿ: ತೀವ್ರ ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವನನ್ನು ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ ಘಟನೆ ನಗರದಲ್ಲಿ ನಡೆದಿದೆ.
ಸೋನಿಯಾ ಗಾಂಧಿ ನಗರದ ನಿವಾಸಿಯಾದ ಈ ವ್ಯಕ್ತಿ ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದ. ಇದರಿಂದ ಗಾಬರಿಗೊಂಡ ಸ್ಥಳೀಯರು ಕೊರೊನಾ ಶಂಕೆ ವ್ಯಕ್ತಪಡಿಸಿ ಸ್ಥಳೀಯ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಪೊಲೀಸರ ಸಹಕಾರದಿಂದ ವ್ಯಕ್ತಿಯನ್ನು ಕಿಮ್ಸ್ಗೆ ಕರೆದೊಯ್ದಿದ್ದಾರೆ.