ಧಾರವಾಡ: ಇಂದು ಬೆಳಗ್ಗೆ ನಾಡೋಜ ಡಾ.ಚೆನ್ನವೀರ ಕಣವಿ ನಿಧನರಾಗಿದ್ದಾರೆ. ಅವರ ಆಶಯದಂತೆ ಪತ್ನಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕಣವಿ ಅವರ ಪುತ್ರ ಪ್ರಿಯದರ್ಶಿ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಣವಿ ಅವರು ಅನಾರೋಗ್ಯದಿಂದ ಜ. 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಎಲ್ಲ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದವು. ಆದರೆ ಶ್ವಾಸಕೋಶಕ್ಕೆ ಸೋಂಕು ಇತ್ತು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ಉಳಿಸಿಕೊಳ್ಳಲು ಆಗಲಿಲ್ಲ ಎಂದರು.
ಇದನ್ನೂ ಓದಿ: ಚೆಂಬೆಳಕಿನ ಕವಿ, ನಾಡೋಜ ಡಾ.ಚನ್ನವೀರ ಕಣವಿ ಇನ್ನಿಲ್ಲ
ಕೆಸಿಡಿ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಇಂದು ಮಧ್ಯಾಹ್ನದಿಂದ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.