ಹುಬ್ಬಳ್ಳಿ: 'ಯುವರತ್ನ' ಚಲನಚಿತ್ರದ ಪ್ರಚಾರಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಮಾರ್ಚ್ 21 ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೋಡ್ ಶೋ ಮೂಲಕ ನಗರದ ವಿವಿಧ ಚಿತ್ರಮಂದಿರಗಳಿಗೆ ಭೇಟಿ ನೀಡಲಿದ್ದಾರೆ. ನಂತರ ನಗರದ ಅರ್ಬನ್ ಓಯಾಸಿಸ್ ಮಾಲ್ನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅಲ್ಲಿ ನೆರೆದಿರುವ ಅಭಿಮಾನಿಗಳ ಜೊತೆ ಸಂವಾದ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಖಳನಟ ರವಿಶಂಕರ್, ಧನಂಜಯ, ನಿರ್ಮಾಪಕ ಕಿರಗಂದೂರು ಹಾಗೂ ಅನೇಕ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ತಿಳಿಸಿದ್ದಾರೆ.