ETV Bharat / city

ಪಾಕ್ ಪರ ಘೋಷಣೆ ಪ್ರಕರಣ: ವಿದ್ಯಾರ್ಥಿಗಳ ಕಾಶ್ಮೀರ ಪ್ರಯಾಣದ ಅರ್ಜಿ ವಜಾ - Pro-Pak declaration case

ಊರಿಗೆ ಅವಕಾಶ ಮಾಡಿಕೊಡುವಂತೆ ಕೋರಿ ಪಾಕ್​ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ಹುಬ್ಬಳ್ಳಿಯ 2ನೇ ಜೆಎಂಎಫ್​​ಸಿ ನ್ಯಾಯಾಲಯ ವಜಾಗೊಳಿಸಿದೆ.

Students shouting pro-Pak slogans
ಪಾಕ್​ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳು
author img

By

Published : Jul 27, 2020, 6:03 PM IST

ಹುಬ್ಬಳ್ಳಿ: ಪಾಕ್​​ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ತಮ್ಮ ಮೂಲ ಸ್ಥಳಕ್ಕೆ ಹೋಗಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಹುಬ್ಬಳ್ಳಿಯ 2ನೇ ಜೆಎಂಎಫ್​​ಸಿ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಫೆ.15ರಂದು ಕೆಎಲ್​​ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿಗಳ ಜಾಮೀನಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ತಂಡವು ಕಾಶ್ಮೀರ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿದೆ. ಈ ಮೊದಲು ಮಾ.5ರಂದು ವಿದ್ಯಾರ್ಥಿಗಳ ಪರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಬೆಂಗಳೂರಿನಿಂದ ಆಗಮಿಸಿದ ಮೈತ್ರೇಯಿ ಕೃಷ್ಣನ್ ನೇತೃತ್ವದ 10 ಜನ ವಕೀಲರ ತಂಡವು ವಾದ ಮಂಡಿಸಿತ್ತು.

Pro-Pak declaration case
ಕಾಶ್ಮೀರಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ

ವಿದ್ಯಾರ್ಥಿಗಳಿಗೆ ಷರತ್ತು ಬದ್ಧ ಜಾಮೀನಿನ ಮೇಲೆ ರಾಜ್ಯ ಬಿಟ್ಟು ತೆರಳದಂತೆ ನಿರ್ಬಂಧ ಹಾಕಿ ಬೆಂಗಳೂರಿನಲ್ಲಿರಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಈಗ ಬೆಂಗಳೂರಿನಿಂದ ಕಾಶ್ಮೀರಕ್ಕೆ ಹೋಗಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿ ನ್ಯಾಯಾಧೀಶ ವಿಶ್ವನಾಥ ಮುಗೂತಿ ಅವರಿದ್ದ ಪೀಠ ಆದೇಶ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.