ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ತಹಶಿಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ ಆರೋಪಿಸಿದರು.
ಕೇಂದ್ರ ಸರ್ಕಾರ ಅನುಸರಿಸುತ್ತಿರುವ ನವ ಉದಾರೀಕರಣದ ಆರ್ಥಿಕ ನೀತಿಗಳಿಂದಾಗಿ ದೇಶದ ಆರ್ಥಿಕ ಸ್ಥಿತಿ ಕುಸಿಯುತ್ತಿದೆ. ಅಲ್ಲದೇ ದೇಶದಲ್ಲಿ ದುಡಿಯುವ ಜನರನ್ನು ಕೇಂದ್ರದ ಬಿಜೆಪಿ ಸರ್ಕಾರ ಕಡೆಗಣಿಸಿದೆ ಎದು ಆರೋಪಿಸಿದರು. ಅಲ್ಲದೆ, ಕೂಡಲೇ ಕೇಂದ್ರ ಸರ್ಕಾರ ಸಂಘಟಿತ, ಅಸಂಘಟಿತ ಯೋಜನಾ ಕಾರ್ಮಿಕರಿಗೆ ಮಾಸಿಕ ಕನಿಷ್ಠ ವೇತನವನ್ನು 18,000 ರೂ. ಹಾಗೂ ಬೆಲೆ ಏರಿಕೆಗೆ ತಕ್ಕಂತೆ ತುಟ್ಟಿ ಭತ್ಯೆ ನಿಗದಿ ಮಾಡುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಳಸಾ ಬಂಡೂರಿ ಹೋರಾಟಗಾರ ಅಮೃತ ಇಜಾರೆ, ಬಿ.ಐ. ಈಳಿಗೇರ, ಕೆ.ಹೆಚ್. ಪಾಟೀಲ್, ಬಿ.ಎಸ್. ಸೊಪ್ಪಿನ್, ಶಿವಣ್ಣ ಹುಬ್ಬಳ್ಳಿ, ಸುರೇಶ್ ಗೌಡ ಪಾಟೀಲ್ ಸೇರಿದಂತೆ ಇತರರು ಭಾಗವಹಿಸಿದ್ದರು.