ಧಾರವಾಡ: ಅಧಿಕಾರಿಗಳು ತಮಗೆ ಬೇಕಾದಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ಜಿಪಂ ಆವರಣದಲ್ಲಿ ಧರಣಿ ನಡೆಸಲಾಯಿತು.
ಜಿಪಂ ವಿಜಯಲಕ್ಷ್ಮೀ ಪಾಟೀಲ್ ಹಾಗೂ ಉಪಾಧ್ಯಕ್ಷ ಶಿವಾನಂದ ಕರಿಗಾರ ಸೇರಿದಂತೆ ಸದಸ್ಯರು ಧರಣಿ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅತಿವೃಷ್ಟಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ಜಿಪಂ ಸದಸ್ಯರ ಗಮನಕ್ಕೆ ತರುತ್ತಿಲ್ಲ. ಅವರಿಗೆ ಬೇಕಾದಂತೆ ವರ್ತನೆ ಮಾಡುತ್ತಿದ್ದಾರೆ ಎಂದು ದೂರಿದರು.
ಜಿಲ್ಲಾ ಪಂಚಾಯತಿ ಅಧಿಕಾರಿಗಳು ತಮ್ಮಗೆ ಬೇಕಾದ ಏಜೆನ್ಸಿಗಳಿಗೆ ಅಗ್ರಿಮೆಂಟ್ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿದರು. ನೆರೆ ಸಂತ್ರಸ್ತರಿಗೆ ಇನ್ನೂ ಸರಿಯಾಗಿ ಪರಿಹಾರ ವಿತರಣೆಯೇ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.