ETV Bharat / city

ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ - ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸೇನೆ ಪ್ರತಿಭಟನೆ

ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯನ್ನು ಏಕಾಏಕಿ ಯಾವುದೇ ಮಾಹಿತಿಯಿಲ್ಲದೇ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸೇನೆ ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು.

protest-dismissal-of-private-hospital-staff
ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸೇನೆ
author img

By

Published : Feb 17, 2020, 4:54 PM IST

ಹುಬ್ಬಳ್ಳಿ: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಗೆ ಕಿರುಕುಳ ನೀಡುತ್ತಾ ಏಕಾಏಕಿ ಯಾವುದೇ ಮಾಹಿತಿಯಿಲ್ಲದೇ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸೇನೆ ಕಾಟನ್ ಮಾರ್ಕೆಟ್ ರಸ್ತೆಯಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ

ಆಸ್ಪತ್ರೆಯಲ್ಲಿ ಸುಮಾರು 20-25 ವರ್ಷಗಳ ಕಾಲ ಖಾಯಂ ಆಗಿ ಸೇವೆ ಸಲ್ಲಿಸುತ್ತಿದ್ದರೂ ಕೂಡ ಯಾವುದೇ ಮಾಹಿತಿಯನ್ನು ನೀಡದೇ ಕೆಲಸದಿಂದ ವಜಾ ಮಾಡಿರುವುದು ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಏಕಾಏಕಿ ಕೆಲಸದಿಂದ ವಜಾಗೊಳಿಸಿರುವುದು ಕಾರ್ಮಿಕರ ಜೀವನದ ಮೇಲೆ ಕೊಡಲೆ ಪೆಟ್ಟು ಹಾಕಿದಂತಾಗಿದೆ. ಕೂಡಲೇ ಅಂತಹ ಆಸ್ಪತ್ರೆಯ ವಿರುದ್ಧ ಸಹಾಯಕ ಕಾರ್ಮಿಕ ಆಯುಕ್ತರು ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.