ಧಾರವಾಡ: ಜಿಲ್ಲೆಯ ಸರ್ಕಾರಿ ಅಭಿಯೋಜಕರು ಎಂದು ಅಕ್ರಮವಾಗಿ ನೇಮಕಗೊಂಡ ಸುನೀಲ್ ಗುಡಿ ಅವರ ಮೇಲೆ ವಿಚಾರಣೆ ನಡೆಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ದಲಿತ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ದಲಿತ ಪರ ಸಂಘಟನೆ ಕಾರ್ಯಕರ್ತರು, ವಕೀಲ ಸುನೀಲ್ ಗುಡಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ಸರ್ಕಾರಿ ಅಭಿಯೋಜಕರು ಎಂದು ಗುತ್ತಿಗೆ ಆಧಾರದ ಮೇಲೆ ಸರ್ಕಾರಕ್ಕೆ ಸುಳ್ಳು ಮಾಹಿತಿ ಸಲ್ಲಿಸಿ ನೇಮಕಗೊಂಡಿದ್ದಾರೆ ಎಂದು ದೂರಿದರು.
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಿವಿಲ್ ವ್ಯಾಜ್ಯದ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ಹೋಗಿ ಕರ್ತವ್ಯನಿರತ ಪೊಲೀಸರ ಮೇಲೆ ದೌರ್ಜನ್ಯ ಮಾಡಿ, ವಕೀಲರ ಸಂಘಕ್ಕೆ ಸುಳ್ಳು ಮಾಹಿತಿ ನೀಡಿ, ಕೋರ್ಟ್ ಕಲಾಪ ಬಹಿಷ್ಕರಿಸಿ ಸಾರ್ವಜನಿಕರಿಗೆ ತೊಂದರೆ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.