ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿದ್ದಾರೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ನಿಷೇಧಾಜ್ಞೆ ಜಾರಿಯ ನಡುವೆಯೂ ಕಾಂಗ್ರೆಸ್, ಸಿಪಿಐ, ಸಿಪಿಎಂ, ದಲಿತ ಪರ ಸಂಘಟನೆ ಸೇರಿದಂತೆ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು, ಈ ವೇಳೆ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು 20 ಕ್ಕೂ ಹೆಚ್ಚು ಪ್ರತಿಭಟನಾನಿರತರನ್ನು ಬಂಧಿಸಿದರು.
ಪ್ರತಿಭಟನೆಯಲ್ಲಿ ಬಾಬಾಜಾನ್ ಮುಧೋಳ, ರಾಜಶೇಖರ ಮೆಣಸಿನಕಾಯಿ, ಅನ್ವರ ಮುಧೋಳ, ಸಿದ್ದು ತೇಜಿ, ವಿಜಯ ಗುಂಟ್ರಾಳ, ಬಸೀರ ಅಹ್ಮದ ಮುಧೋಳ, ಮಹೇಶ ಪತ್ತಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.