ಧಾರವಾಡ: ಮಹಿಳೆಯ ಪರ್ಸ್ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದು ಸಾರ್ವಜನಿಕರು ಗೂಸಾ ನೀಡಿದ ಘಟನೆ ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.
ಜಾವೇದ ಎಂಬಾತ ಪರ್ಸ್ ಕಳ್ಳತನ ಮಾಡಿ ಎಸ್ಕೇಪ್ ಆಗುವ ವೇಳೆ ಸಾರ್ವಜನಿಕರಿಗೆ ಸಿಕ್ಕಿ ಬಿದ್ದಿದ್ದಾನೆ. ಈತನನ್ನು ಹಿಡಿದು ಸಾರ್ವಜನಿಕರೇ ಹಿಗ್ಗಾಮುಗ್ಗಾ ಥಳಿಸಿ ನಡು ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಾರೆ.
ಬಳಿಕ ಸಾರ್ವಜನಿಕರು ಆರೋಪಿಯನ್ನು ಹೊಸ ಬಸ್ ನಿಲ್ದಾಣದ ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.