ಹುಬ್ಬಳ್ಳಿ: ಕೋವಿಡ್-19 ಹಿನ್ನೆಲೆ, ಜಿಲ್ಲಾಧಿಕಾರಿಗಳ ಆದೇಶದಂತೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕುಲಕರ್ಣಿ ಮನೆತನದವರಿಂದ ಪ್ರತಿಷ್ಠಾಪಿಸಲಾಗುವ ಗಣೇಶ ಮೂರ್ತಿಗಳ ಸಾರ್ವಜನಿಕರ ದರ್ಶನಕ್ಕೆ ನಿಷೇಧ ಹೇರಲಾಗಿದೆ.
ಕುಲಕರ್ಣಿ ಮನೆತನದವರು ಸಾಂಪ್ರದಾಯಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಪೂಜೆ-ಪುರಸ್ಕಾರ ನಡೆಸಲು ಅವಕಾಶ ನೀಡಲಾಗಿದೆ.
ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರು ದರ್ಶನಕ್ಕೆ ಆಗಮಿಸದಂತೆ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.