ETV Bharat / city

Karnataka Weekend Curfew: ಹಾವೇರಿ, ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ

ಕೊರೊನಾ ಹಾಗೂ ಒಮಿಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರ ಹೇರಿರುವ ವೀಕೆಂಡ್​​ ಕರ್ಫ್ಯೂಗೆ ಹುಬ್ಬಳ್ಳಿ, ಹಾವೇರಿ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇತ್ತ ವೀಕೆಂಡ್​ ಕರ್ಫ್ಯೂಗೆ ಚಿಕ್ಕೋಡಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Public Reaction On Karnataka Weekend Curfew
ವೀಕೆಂಡ್ ಕರ್ಫ್ಯೂ : ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ
author img

By

Published : Jan 8, 2022, 10:10 AM IST

ಹಾವೇರಿ/ಹುಬ್ಬಳ್ಳಿ/ಚಿಕ್ಕೋಡಿ: ವೀಕೆಂಡ್ ಕರ್ಫ್ಯೂಗೆ ಹಾವೇರಿ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್​​ ಆಗಿವೆ. ನಗರದ ಜನ ಪ್ರಮುಖ ಸ್ಥಳ ಮತ್ತು ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ.

ಹೋಟೆಲ್​​, ಮೆಡಿಕಲ್ ಶಾಪ್, ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಬಸ್ ನಿಲ್ದಾಣ ಸೇರಿದಂತೆ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿದ್ದು, ಆಯಕಟ್ಟಿನ ಜಾಗಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಚಿಕ್ಕೋಡಿಯಲ್ಲಿ ಹೆಸರಿಗಷ್ಟೇ ವೀಕೆಂಡ್​​ ಕರ್ಫ್ಯೂ:

ರಾಜ್ಯಾದ್ಯಂತ ಕೊರೊನಾ, ಒಮಿಕ್ರಾನ್ ಸೋಂಕು ತಡೆಗೆ ರಾಜ್ಯ ಸರ್ಕಾರ ಹೇರಿರುವ ವೀಕೆಂಡ್​ ಕರ್ಫ್ಯೂಗೆ ಚಿಕ್ಕೋಡಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಜನಸಂಚಾರ‌ ಪ್ರಾರಂಭವಾಗುತ್ತಿದ್ದು, ಅಂಗಡಿ ಮುಂಗಟ್ಟುಗಳು‌ ಮಾತ್ರ ಬಂದ್ ಆಗಿವೆ.

ಚಿಕ್ಕೋಡಿ ಪಟ್ಟಣದಲ್ಲಿ ಬೈಕ್, ಸವಾರರು, ವಾಹನ ಸವಾರರು ಎಂದಿನಂತೆ ಓಡಾಟ ನಡಸುತ್ತಿದ್ದಾರೆ. ಇತ್ತ ವೀಕೆಂಡ್​ ಕರ್ಫ್ಯೂ ಜಾರಿಗೆ ಬಂದೋಬಸ್ತ್ ಮಾಡಿಕೊಳ್ಳಬೇಕಿದ್ದ ಪೊಲೀಸರು ಮಾತ್ರ ಎಲ್ಲಿಯೂ ಬ್ಯಾರಿಕೇಡ್ ಗಳನ್ನು ಹಾಕದೇ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರುವಲ್ಲಿ ವಿಫಲವಾಗಿದ್ದಾರೆ ಎನ್ನಲಾಗ್ತಿದೆ.

ರಾಜ್ಯಾದ್ಯಂತ ವೀಕೆಂಡ್​​​ ಕರ್ಪ್ಯೂ ಇದ್ದರೂ ಚಿಕ್ಕೋಡಿಯಲ್ಲಿ ಪೊಲೀಸ್​​ ಸಿಬ್ಬಂದಿ ನಿಯೋಜನೆ ಮಾಡಿಲ್ಲ‌. ಪಟ್ಟಣದಲ್ಲಿ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಬೇಕಿದ್ದ ಪೊಲೀಸರು ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ವೀಕೆಂಡ್​ ಕರ್ಫ್ಯೂ ಹೆಸರಿಗಷ್ಟೇ ಸೀಮಿತವಾಗಿದೆ.

ಹುಬ್ಬಳ್ಳಿಯಲ್ಲಿ ಫೀಲ್ಡಿಗಿಳಿದ ಪೊಲೀಸರು:

ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಪೊಲೀಸರು ಫೀಲ್ಡಿಗಿಳಿದಿದ್ದಾರೆ‌. ಚೆನ್ನಮ್ಮ ವೃತ್ತದಲ್ಲಿ ಪೊಲೀಸರಿಂದ ವಾಹನ ತಪಾಸಣೆ ಆರಂಭವಾಗಿದೆ. ಅಲ್ಲಲ್ಲಿ ಬ್ಯಾರಿಕೇಡ್ ಹಾಕಿ ವಾಹನ ತಪಾಸಣೆ ನಡೆಸಲಾಗುತ್ತಿದೆ. ಕರ್ಫ್ಯೂ ಜಾರಿಯಲ್ಲಿದ್ದರೂ ಜನರ ಓಡಾಟ ನಿಂತಿಲ್ಲ. ವಿನಾಕಾರಣ ಮನೆಯಿಂದ ಆಚೆ ಬರಬಾರದೆಂದು ಪೊಲೀಸರು ತಾಕೀತು ಮಾಡುತ್ತಿದ್ದಾರೆ.

ಪ್ರಮುಖ ಮಾರ್ಕೆಟ್ ಸಂಪೂರ್ಣ ಬಂದ್:

ವೀಕೆಂಡ್ ಕರ್ಫ್ಯೂ ಹಿನ್ನೆಲೆ ನಗರದ ಪ್ರಮುಖ ಮಾರ್ಕೆಟ್​​ಗಳು ಸಂಪೂರ್ಣ ಬಂದ್ ಆಗಿವೆ. ದುರ್ಗದ ಬೈಲ್, ಜನತಾ ಬಜಾರ್ ಸೇರಿದಂತೆ ವಿವಿಧ ಮಾರ್ಕೆಟ್ ಗಳಲ್ಲಿ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ. ಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದು, ಜನ ಸಂಚಾರಕ್ಕೆ ಬ್ರೇಕ್ ಬಿದಿದೆ.

ಬಸ್ ಸಂಚಾರ ವಿರಳ:

ಬಸ್ ಸಂಚಾರ ಎಂದಿನಂತೆ ಶುರುವಾದರೂ ವಿರಳವಾಗಿವೆ. ಪ್ರಯಾಣಿಕರ ಸಂಖ್ಯೆಗನುಗುಣವಾಗಿ ಬಸ್ ಸಂಚರಿಸುತ್ತಿವೆ. ಆದರೂ ನಗರ ಸಾರಿಗೆ ಹಾಗೂ ಅಂತರ ಜಿಲ್ಲಾ ಸಾರಿಗೆ ಬಸ್ ಸಂಚರಿಸುತ್ತಿದ್ದು, ಪ್ರಯಾಣಿಕರ ಅವಶ್ಯಕತೆಗೆ ತಕ್ಕಂತೆ ಸಂಚರಿಸುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ಮುಂದಿನ ತಿಂಗಳು ಕೋವಿಡ್​ ಉತ್ತುಂಗಕ್ಕೆ.. ದಿನಕ್ಕೆ 5ಲಕ್ಷ ಕೇಸ್​ ಸಾಧ್ಯತೆ: ಶಾಕಿಂಗ್​ ಕೊಟ್ಟ ಆರೋಗ್ಯ ತಜ್ಞ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.