ಹುಬ್ಬಳ್ಳಿ: ವೀರಾಪುರ ಓಣಿಯ ರೈತ ಭವನ ಉದ್ಘಾಟನೆ ಸಮಾರಂಭದಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ್ ನಡುವೆ ಮಹಿಳಾ ರೈತ ಭವನ ವಿಚಾರವಾಗಿ ಕೆಲಕಾಲ ವಾಗ್ವಾದ ನಡೆಯಿತು.
ರೈತ ಭವನ ಕಟ್ಟಡದಲ್ಲಿ ಮಹಿಳಾ ಭವನ ನಿರ್ಮಾಣ ವಿಚಾರವಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ್ ಹಾಗೂ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಜಗಳವಾಡಿದ್ದಾರೆ.
ಇದೇ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ ಅವರನ್ನು ವೇದಿಕೆ ಬಿಟ್ಟು ಹೊರ ಹೋಗುವಂತೆ ಹೇಳಿದ್ದಕ್ಕೆ ಕೆಂಡಾಮಂಡಲರಾದ ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ್ ಶಾಸಕರ ವಿರುದ್ಧ ಗರಂ ಆದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಚಿವ ಜೋಶಿ ಜಗಳವನ್ನು ತಿಳಿಗೊಳಿಸಿದರು.