ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೂಲದ ಅಂದಾಜು 35 ವಯಸ್ಸಿನ ಕುರಿಗಾಯಿ ಮಹಿಳೆ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ವಿಷಯ ಗೊತ್ತಾಗುತ್ತಿದ್ದಂತೆ ಕುಂದಗೋಳ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಹಿಳೆ ಕಟ್ಟಿಗೆ ತರಲು ಹೋದಾಗ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
(ಇದನ್ನೂ ಓದಿ: ಅಹೋರಾತ್ರಿ ಧರಣಿ: ಪ್ರತಿಭಟನೆ ಜೊತೆಗೆ ಕೈ ನಾಯಕರಿಂದ ಅಂತಾಕ್ಷರಿ ಹಾಡು!)