ಹುಬ್ಬಳ್ಳಿ (ಧಾರವಾಡ): ಹುಬ್ಬಳ್ಳಿಯಲ್ಲಿ ಧರ್ಮದ ವಿಚಾರವಾಗಿ ರಾತ್ರೋರಾತ್ರಿ ಅಶಾಂತಿ ಸೃಷ್ಟಿಯಾಗಿದೆ. ಗಲಾಟೆಗೆ ಕಾರಣರಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಅವರ ಸಂಬಂಧಿಕರು ಠಾಣೆಯ ಎದುರು ಹೈಡ್ರಾಮಾ ನಡೆಸಿದ್ದಾರೆ. ಧಾರ್ಮಿಕ ವಿಷಯಕ್ಕೆ ಧಕ್ಕೆ ಉಂಟಾಗುವ ಪೋಸ್ಟ್ ಮಾಡಿದ್ದ ಯುವಕನನ್ನು, ಪೊಲೀಸ್ ಠಾಣೆ ಆವರಣದಲ್ಲಿ ಕಲ್ಲು ತೂರಾಟ ನಡೆಸಿ ಗಲಾಟೆ ಮಾಡಿದವರನ್ನು ಪೊಲೀಸರು ಬಂಧಿಸಿದ್ದಾರೆ.
ಆದರೆ, ಬಂಧಿತರ ಸಂಬಂಧಿಕರು ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಸಂಬಂಧಿಕರನ್ನು ಕೈ ಬಿಡುವಂತೆ ಒತ್ತಾಯಿಸುತ್ತಿದ್ದಾರೆ. ಪೊಲೀಸರು ಹಾಗೂ ಬಂಧಿತರ ಸಂಬಂಧಿಕರ ನಡುವೆ ಮಾತಿನ ಚಕಮಕಿ ನಡೆದಿದೆ.
ಇನ್ನೂ ಬಂಧಿತರನ್ನು ಬೇರೆ ಕಡೆಗೆ ಶಿಫ್ಟ್ ಮಾಡುವ ಸಂದರ್ಭದಲ್ಲಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರನ್ನು ಕರೆದೊಯ್ಯುವಾಗ, ನಮ್ಮ ಮಕ್ಕಳು, ಮನೆಯವರು ತಪ್ಪು ಮಾಡಿಲ್ಲ. ಸುಖಾಸುಮ್ಮನೆ ಬಂಧಿಸಲಾಗಿದೆ ಎಂದು ಪೊಲೀಸ್ ಠಾಣೆ ಎದುರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ ಕಲ್ಲು ತೂರಾಟ ಪ್ರಕರಣ : ಕಿಡಿಗೇಡಿಗಳನ್ನ ಹೆಡೆಮುರಿ ಕಟ್ಟುತ್ತಿರುವ ಪೊಲೀಸರು
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಸುಮಾರು 40ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.