ETV Bharat / city

ಪ್ರವಾಸಕ್ಕೆ ಕರೆದೊಯ್ದು ದರೋಡೆ ಪ್ರಕರಣ: ಹುಬ್ಬಳ್ಳಿಯಲ್ಲಿ ಮೂವರಿಗೆ ಜೈಲು ಶಿಕ್ಷೆ

ಪ್ರವಾಸದ ನೆಪದಲ್ಲಿ ಕರೆದೊಯ್ದು ಚಾಲಕನ ಮೇಲೆ ಹಲ್ಲೆ ಮಾಡಿ, ದರೋಡೆ ಮಾಡಿದ್ದ ಖದೀಮರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

hubli court
hubli court
author img

By

Published : Aug 14, 2021, 12:48 PM IST

ಹುಬ್ಬಳ್ಳಿ: ಮಾಗೋಡು ಜಲಪಾತ ಪ್ರವಾಸಕ್ಕೆ ಹೋಗುವ ನೆಪದಲ್ಲಿ ಕಾರು ಬಾಡಿಗೆ ಪಡೆದು, ಚಾಲಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರ್ಸ್, ಮೊಬೈಲ್, ವಾಹನ ದೋಚಿಕೊಂಡು ಹೋಗಿದ್ದ ಮೂವರಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 20,000 ರೂ. ದಂಡ ವಿಧಿಸಿದೆ.

ಪ್ರವಾಸದ ನೆಪದಲ್ಲಿ ಅಹ್ಮದ ಪಣಿಬಂದ, ಅವಿನಾಶ ಪವಾರ, ಮಂಜುನಾಥ ಪವಾರ ಶಿಕ್ಷೆಗೊಳಗಾದವರು. ಗಿರಣಿಚಾಳ ನಿವಾಸಿ ಗಣೇಶ ಜುಮ್ಹಾಪುರ ಎಂಬಾತ 2014ರ ಜುಲೈ 5ರಂದು ಚೆನ್ನಮ್ಮ ವೃತ್ತದ ಬಳಿ ಈದ್ಗಾ ಮೈದಾನದಲ್ಲಿ ಬಾಡಿಗೆಗಾಗಿ ಕಾರು ನಿಲ್ಲಿಸಿದ್ದರು. ಈ ವೇಳೆ ಓರ್ವ ಯುವತಿಯೊಂದಿಗೆ ಬಂದ ಸಿರಾಜ್ ಪಣಿಬಂದ ಎಂಬಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಜಲಪಾತಕ್ಕೆ ತೆರಳಲು ಬಾಡಿಗೆ ಮಾತನಾಡಿದ್ದ. ಬಳಿಕ ಇಬ್ಬರೂ ಕಾರಿನಲ್ಲಿ ಹೊರಟಿದ್ದರು. ಮಾರ್ಗ ಮಧ್ಯ ಹಳೇ ಹುಬ್ಬಳ್ಳಿ ಶಿಮ್ಲಾ ನಗರದ ಬಳಿ ಸಿರಾಜ್ ತನ್ನ ಸಹಚರರಾದ ಅವಿನಾಶ ಪವಾರ, ಮಂಜುನಾಥ ಪವಾರ ಹಾಗೂ ಓರ್ವ ಬಾಲಾಪರಾಧಿಯನ್ನು ಹತ್ತಿಸಿಕೊಂಡಿದ್ದ.

ಮಾಗೋಡು ಫಾಲ್ಸ್ 10 ಕಿ.ಮೀ. ದೂರ ಇದ್ದಾಗ ಕಾರು ನಿಲ್ಲಿಸಲು ಸೂಚಿಸಿದ್ದರು. ಕಾರು ನಿಲ್ಲಿಸುತ್ತಿದ್ದಂತೆ ಚಾಲಕ ಗಣೇಶನ ಮೇಲೆ ಹಲ್ಲೆ ನಡೆಸಿ, ಕೈಕಾಲುಗಳನ್ನು ಕಟ್ಟಿ ಹಿಂದಿನ ಸೀಟಿನಲ್ಲಿ ಹಾಕಿದ್ದರು. ಬಳಿಕ ಕಾರು ಚಲಾಯಿಸಿಕೊಂಡು ಹುಬ್ಬಳ್ಳಿ ಸಮೀಪದ ಅಂಚಟಗೇರಿ ಬಳಿ ಬಂದು, ಚಾಲಕ ಗಣೇಶನನ್ನು ಹೊರಕ್ಕೆ ಎಸೆದು ವಾಹನ ಸಮೇತ ಪರಾರಿಯಾಗಿದ್ದರು.

ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ಸಚಿನ್ ಚಲವಾದಿ ತನಿಖೆ ನಡೆಸಿದ್ದರು. 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದ್ದಾರೆ.

ದಂಡದ ಮೊತ್ತದಲ್ಲಿ 50 ಸಾವಿರ ರೂ. ಚಾಲಕ ಗಣೇಶನಿಗೆ, 10 ಸಾವಿರ ರೂ.ಗಳನ್ನು ಸರ್ಕಾರಕ್ಕೆ ಪಾವತಿಸಲು ಸೂಚಿಸಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ಗಿರಿಜಾ ಎಸ್. ತಮ್ಮಿನಾಳ ವಾದ ಮಂಡಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.