ಹುಬ್ಬಳ್ಳಿ: ಕಿಲ್ಲರ್ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ದೇಶದಾದ್ಯಂತ ಹಲವಾರು ಸಂಘಟನೆಗಳು ಒಂದಿಲ್ಲೊಂದು ರೀತಿಯಲ್ಲಿ ಸಹಾಯ ಹಸ್ತ ಚಾಚುತ್ತಿದೆ.
ಅದೇ ರೀತಿ ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಮರ್ಥನಂ ಅಂಗವಿಕಲರ ಸಂಸ್ಥೆಯು ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ನಿರತರಾಗಿರುವ ಕೊರೊನಾ ವಾರಿಯರ್ಸ್‌ಗೆ ಸಂರಕ್ಷಣೆ ಹಿನ್ನೆಲೆಯಲ್ಲಿ ಅನೇಕ ಉಪಕರಣಗಳನ್ನು ನೀಡಿದೆ.
ಸಮರ್ಥನಂ ಅಂಗವಿಕಲರ ಸಂಸ್ಥೆಯು ಸುಮಾರು 37 ಲಕ್ಷ ಮೌಲ್ಯದ ಮಾಸ್ಕ್, ಸ್ಯಾನಿಟೈಸರ್, ಫೇಸ್ ಶೀಲ್ಡ್ ಮಾಸ್ಕ್, ಹ್ಯಾಂಡ್ ಗ್ಲೌಸ್, ಪಿಪಿಇ ಕಿಟ್ ಹಾಗೂ ಇನ್ನಿತರ ಸಂರಕ್ಷಣೆ ಸಾಮಾಗ್ರಿಗಳನ್ನು ಕಿಮ್ಸ್ ವೈದ್ಯರಿಗೆ, ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ಪೊಲೀಸ್ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ವಿತರಣೆ ಮಾಡಿದೆ.
ಹು-ಧಾ ಮಹಾನಗರ ಪಾಲಿಕೆ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಅಂಗವಿಕರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಮರ್ಥನಂ ಸಂಸ್ಥೆಯು ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ ರಾಜ್ಯಾದ್ಯಂತ ತಮ್ಮ ಸೇವೆಯನ್ನು ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಅಭಿನಂದನೆ ಸಲ್ಲಿಸಿದರು.