ಹುಬ್ಬಳ್ಳಿ: 6ನೇ ವೇತನ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಜೈಲ್ ಬರೋ ಬೆಂಬಲಿಸಿ ಸರ್ವಧರ್ಮದ ಸ್ವಯಂ ಸೇವಕರು ಪ್ರತಿಭಟನೆ ನಡೆಸಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಾಗೂ ಸಾರಿಗೆ ಸಿಬ್ಬಂದಿ ಸಂಬಂಧಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಸರ್ಕಾರಿ ಬಸ್ ತಡೆದು ಚಾಲಕನನ್ನು ಕೆಳಗೆ ಇಳಿಸಲು ಯತ್ನಿಸಿದರು. ಆಗ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು.
ಕಳೆದ 6 ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತದೆ. ಆದರೆ ಸರ್ಕಾರ ಮಾತ್ರ ಇನ್ನುವರೆಗೂ ಪ್ರತಿಭಟನಾಕಾರರ ಜೊತೆ ಮಾತನಾಡದೇ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಆರೋಪಿಸಿದರು.